ಮೈಸೂರು – ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಭಗತ್ ಸಿಂಗ್ ಯೂತ್ ಫೌಂಡೇಶನ್ ವತಿಯಿಂದ ಇಂದು ಕೆಆರ್ ನಗರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾವಿತ್ರಿ ಬಾಯಿ ಫುಲೆ ಅವರ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ,ವಿಶಿಷ್ಟವಾಗಿ ಆಚರಿಸಲಾಯಿತು.
ಕಾಲೇಜಿನ ಹೊರ ಆವರಣದಲ್ಲಿ ಸಾವಿತ್ರಿ ಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.ನಂತರ ಭಾವಚಿತ್ರದ ಮುಂದೆ ಮೇಣದ ಬತ್ತಿಗಳನ್ನು ಹಚ್ಚಿ ಬೆಳಕು ಮೂಡಿಸುವ ಸಾವಿತ್ರಿಬಾಯಿ ಫುಲೆ ಅವರಿಗೆ ಗೌರವ ಸೂಚಿಸಲಾಯಿತು.
ಭಗತ್ ಸಿಂಗ್ ಯೂತ್ ಫೌಂಡೇಶನ್ ಸಂಸ್ಥೆಯ ಗೌರವ ಸಲಹೆಗಾರರಾದ ಸಾಹಿತಿ ಡಾ. ಭೇರ್ಯ ರಾಮಕುಮಾರ್, ಫೌಂಡೇಶನ್ ಕಾರ್ಯದರ್ಶಿ ರಕ್ಷಿತ್, ಖಜಾಂಚಿ ಕೃಷ್ಣಯ್ಯ ,ಚೆಲುವನ್ ,ರಾಜೇಶ್,ರಾಕೇಶ್,ಗಿರೀಶ್, ಆದಿ,ಅಮಿತ್ ಮೊದಲಾದವರು ಕಾರ್ಯಕ್ರಮ ದಲ್ಲಿ ಮಾತನಾಡಿ ಸಾವಿತ್ರಿ ಬಾಯಿಯವರ ಜೀವನ, ಮಹಿಳಾ ಶಿಕ್ಷಣಕ್ಕೆ ಅವರ ನೀಡಿದ ಕೊಡುಗೆಗಳನ್ನು ಸ್ಮರಿಸಿದರು.