ಸಿಂದಗಿ: ಇಡೀ ರಾಜ್ಯಾದ್ಯಂತ ಜ.21ರಿಂದ 29ರವರೆಗೆ ವಿಜಯ ಸಂಕಲ್ಪ ಅಭಿಯಾನ ಹಮ್ಮಿಕೊಂಡಿದ್ದು ಅದು ಜಿಲ್ಲೆಯ ಸಿಂದಗಿ ಮತಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಹೇಳಿದರು.
ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜ.2 ರಿಂದ 12ರವರೆಗೆ ಭೂತ್ ಮಟ್ಟದ ವಿಜಯ ಅಭಿಯಾನ ಹಮ್ಮಿಕೊಳ್ಳಲಾಗಿತ್ತು ಎಲ್ಲ ಭೂತ್ ಗಳಲ್ಲಿ ಮನೆ ಮನೆಗೆ ಧ್ವಜ ಹಾರಿಸುವ ಕಾರ್ಯಕ್ರಮ ಹಾಗು ಭೂತ್ ಸಮಿತಿ ಕಾರ್ಯವೈಖರಿಯನ್ನು ಪರಿಶೀಲಿಸಿ ಜವಾಬ್ದಾರಿ ನೀಡುವುದಲ್ಲದೆ ಪೇಜ್ ಪ್ರಮುಖರನ್ನು ಗುರುತಿಸುವುದು, ಕಳೆದ ಎಂಟೂವರೆ ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದೀಜಿಯವರು ಹಮ್ಮಿಕೊಂಡ ಮನ್ ಕೀ ಬಾತ್ ಕಾರ್ಯಕ್ರಮವು ಜನರ ಭಾವನೆಗಳಿಗೆ ಸ್ಪಂದಿಸುವುದು, 271 ಭೂತ್ ಗಳಲ್ಲಿ 180 ಭೂತ್ ಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಅಲ್ಲದೆ 21 ರಿಂದ 29ರ ವರೆಗೆ ಆಯಾ ಕ್ಷೇತ್ರಗಳ ಶಾಸಕರ ಹಾಗೂ ಸಂಸದರ ಕಾರ್ಯ ವೈಖರಿಯನ್ನು ಬಿಂಬಿಸುವಂಥ ಕರಪತ್ರಗಳನ್ನು ಬಿತ್ತರಿಸುವುದು ಹೀಗೆ ಸರಕಾರದ ಅನೇಕ ಕಾರ್ಯಕ್ರಮಗಳ ಪ್ರಚಾರ ಸಿಗಲಿದೆ ಈ ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರ ಜನಸಂಖ್ಯೆ ಸೇರಿಸುವ ಪ್ರಯತ್ನ ನಮ್ಮದಾಗಿದೆ ಎಂದರು.
ಈ ಪತ್ರಿಕಾಗೋಷ್ಠಿಯಲ್ಲಿ ಬೆಳಗಾವಿ ವಿಭಾಗದ ಪ್ರಕೋಷ್ಠಕ ಚಂದ್ರಕಾಂತ ಕವಟಗಿ, ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ ಬಿರಾದಾರ, ಮಲ್ಲಿಕಾರ್ಜುನ ಜೋಗುರ, ಶಿವರುದ್ರ ಬಾಗಲಕೋಟ, ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಶಾಸಕ ರಮೇಶ ಭೂಸನುರ, ದೇವರ ಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಇಂಡಿಯ ದಯಾಸಾಗರ ಪಾಟೀಲ ಇದ್ದರು.