ಸಿಂದಗಿ : ತಾಲೂಕಿನ ನಾಗಾವಿ ಬಿ.ಕೆ ಗ್ರಾಮಪಂಚಾಯತಿಯಲ್ಲಿ ಸರಿ ಸುಮಾರು 1.00 (ಒಂದು )ಕೋಟಿಗೂ ಅಧಿಕ ಹಣ ಭ್ರಷ್ಟಾಚಾರವಾಗಿದ್ದು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಗೆ ಗುರಿ ಪಡಿಸುವಂತೆ ದಲಿತ ವಿದ್ಯಾರ್ಥಿ ಪರಿಷತ ಜಿಲ್ಲಾ ಅಧ್ಯಕ್ಷರಾದ ಹರ್ಷವರ್ಧನ ಪೂಜಾರಿ ಮತ್ತು ಬಹುಜನ ಸಮಾಜ ಪಾರ್ಟಿಯ ಜೇವರ್ಗಿ ತಾಲೂಕ ಉಪಾಧ್ಯಕ್ಷ ಗಂಗಾಧರ ಎಂ.ಜೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಇದರ ಬಗ್ಗೆ ಮಾಹಿತಿ ಕೇಳಿ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದರೂ ಇಲ್ಲಿಯವರೆಗೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಯಾವುದೇ ಮಾಹಿತಿ ನೀಡಿರುವುದಿಲ್ಲ ಮತ್ತು ಪಂಚಾಯತಿಯ ಸೆಕ್ರೆಟರಿ ಮಾಹಿತಿ ಕೇಳಿದರೂ ಅವರು ಅದಕ್ಕೆ ಸ್ಪಂದನೆ ಮಾಡುತ್ತಿಲ್ಲ. ಈ ಎಲ್ಲದರ ಬಗ್ಗೆ ಲೋಕಾಯುಕ್ತರಿಗೂ ದೂರು ಸಲ್ಲಿಸಿದ್ದರೂ ತನಿಖಾ ಹಂತದಲ್ಲಿದೆ. ಈ ಒಂದು ಗ್ರಾಮ ಪಂಚಾಯತ ಗ್ರಾಮಗಳ ಅಭಿವೃದ್ದಿ ಮಾಡುವಲ್ಲಿ ವಿಫಲವಾಗಿದ್ದು ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆಯವರಿಗೆ ಒತ್ತಾಯಿಸಿದ್ದಾರೆ.