ಸವದತ್ತಿ: ಎಸ್ ವ್ಹಿ ಎಸ್ ಬೆಳ್ಳುಬ್ಬಿ ಮಹಾವಿದ್ಯಾಲಯ ಹಾಗೂ ಸಹೃದಯ ಸಾಹಿತ್ಯ ಪ್ರತಿಷ್ಠಾನದ ಸಹಯೋಗದೊಂದಿಗೆ ಡಿಸೆಂಬರ್ 10 ರಂದು ಬೆಳಿಗ್ಗೆ 10.30 ಕ್ಕೆ ಕಾಲೇಜಿನ ಸಭಾಂಗಣದಲ್ಲಿ ಕವಿ, ವಿಮರ್ಶಕ ನಾಗೇಶ್ ಜೆ. ನಾಯಕ ಅವರ ‘ಮನುಷ್ಯರಿಲ್ಲದ ನೆಲ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎನ್. ಆರ್. ಸವತಿಕರ ಅಧ್ಯಕ್ಷತೆ ವಹಿಸಲಿದ್ದಾರೆ. ಗೋಕಾಕದ ವಿಶ್ರಾಂತ ಪ್ರಾಚಾರ್ಯರು, ಜಾನಪದ ತಜ್ಞರಾದ ಡಾ. ಸಿ. ಕೆ. ನಾವಲಗಿ ಕೃತಿ ಬಿಡುಗಡೆ ಮಾಡಲಿದ್ದಾರೆ. ನೇಸರಗಿ ಸರಕಾರಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಫ್. ಡಿ. ಗಡ್ಡಿಗೌಡರ ಕೃತಿ ಕುರಿತು ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸವದತ್ತಿಯ ರಂಗ ನಿರ್ದೇಶಕರಾದ ಝಕೀರ್ ನದಾಫ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಧಾರವಾಡದ ಆರ್ಟ್ ಪಾಯಿಂಟ್‍ನ ವಿಠಲ ಬಸಳಿಗುಂದಿ ಅವರಿಗೆ ಸನ್ಮಾನ ನಡೆಯಲಿದೆ ಎಂದು ಸಹೃದಯ ಸಾಹಿತ್ಯ ಪ್ರತಿಷ್ಠಾನದ ಸಂಚಾಲಕರಾದ ಎಸ್. ಬಿ. ಗರಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.