ಗಣೇಶ ಕಾಸರಗೋಡು ಅವರಿಗೆ ರಾಷ್ಟ್ರೀಯ ಪ್ರಶಸ್ತಿ

Must Read

ಕಾಸರಗೋಡು : ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ ಕೊಡಮಾಡುವ “ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2025.”ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಸಾಹಿತಿ ಗಣೇಶ್ ಕಾಸರಗೋಡು ಅವರು ಆಯ್ಕೆಯಾಗಿದ್ದಾರೆ. .

ಆಗಸ್ಟ್ 27.2025.ರ ಸಂಜೆ 5ಗಂಟೆಗೆ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಸಭಾ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಕನ್ನಡ ಭವನ ಸ್ಥಾಪಕ ಅಧ್ಯಕ್ಷರು ಕಾರ್ಯಕ್ರಮ ಉದ್ಘಾಟಿಸಲಿರುವರು.

ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ನಿರ್ದೇಶಕರಾದ ಡಾ. ವೆಂಕಟ್ರಮಣ ಹೊಳ್ಳ ಅಧ್ಯಕ್ಷತೆ ವಹಿಸುವರು. ಹಿರಿಯ ಸಾಹಿತಿ ರಾಧಾಕೃಷ್ಣ ಉಳಿಯತಡ್ಕ ಗಣೇಶ ಕಾಸರಗೋಡು ಬಗ್ಗೆ ಮಾತನಾಡಲಿರುವರು.

ಪತ್ರಕರ್ತ ಪ್ರದೀಪ ಬೇಕಲ್ ಮೊದಲಾದ ಹಿರಿಯ ಪತ್ರಕರ್ತರು, ಹಿರಿಯ ಸಾಹಿತಿಗಳು, ಹಾಗೂ ಗಣೇಶ ಕಾಸರಗೋಡು ಅವರ ನಿಕಟವರ್ತಿಗಳು, ಅಭಿಮಾನಿಗಳು ಕಾರ್ಯಕ್ರಮ ದಲ್ಲಿ ಭಾಗವಹಿಸುವರು. ಎಂದು ಕನ್ನಡ ಭವನ ಸಂಚಾಲಕಿ, ಸಂದ್ಯಾ ರಾಣಿ ಟೀಚರ್ ಹಾಗೂ ಕಾರ್ಯದರ್ಶಿ ವಸಂತ ಕೆರೆಮನೆ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ವಿದ್ಯಾರ್ಥಿಗಳು ತಂತ್ರಜ್ಞಾನದಿಂದಾಗಿ ದಾರಿ ತಪ್ಪಬಾರದು – ಲಕ್ಷ್ಮಿ ಸಾಲೊಡಗಿ

ಸಿಂದಗಿ - ಇಂದಿನ ಯುವ ಜನಾಂಗ ಮೊಬೈಲ್ ಅವಲಂಬಿತ ಜಗತ್ತಿನಲ್ಲಿದೆ. ಎಲ್ಲವೂ ಅಂಗೈನಲ್ಲಿಯೇ ಹಿಡಿದಿಟ್ಟುಕೊಳ್ಳುವ ಮನೋಭಾವದ ವಯಸ್ಸಿನ ಹದಿ ಹರೆಯದವರು ತಂತ್ರಜ್ಞಾನಗಳ ಪ್ರಭಾವಕ್ಕೆ ಒಳಗಾಗಿ ಹಾದಿ...

More Articles Like This

error: Content is protected !!
Join WhatsApp Group