ಮೂಡಲಗಿ : ಜು.14 ರಂದು ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾ ಭವನದಲ್ಲಿ ರಾಷ್ಟ್ರ ಮಟ್ಟದ ಉಪ್ಪಾರ ಸಮಾಜದ ವಧು ವರರ ಮತ್ತು ಪಾಲಕ, ಪೋಷಕರ ಸಮಾಗಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಹಾಗೂ ಶ್ರೀ ವಿಶ್ವ ಭಗೀರಥ ಟ್ರಸ್ಟನ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ, ತಮಿಳುನಾಡು, ಕೇರಳ, ಗೋವಾ, ಆಂಧ್ರಪ್ರದೇಶ, ತೆಲಂಗಾಣ ಹೀಗೆ ಅನೇಕ ರಾಜ್ಯಗಳಿಂದ ವಧು ವರರು ಮತ್ತು ಪಾಲಕರು ಪಾಲ್ಗೊಳ್ಳಲಿದ್ದಾರೆ. ಈಗಾಗಲೆ 200 ಕ್ಕೂ ಹೆಚ್ಚು ವಧು ವರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.
ಈ ಕಾರ್ಯಕ್ರಮಕ್ಕೆ ಉಪ್ಪಾರ ಸಮಾಜದ ಸರ್ವ ಪೂಜ್ಯರು ಸಾನ್ನಿಧ್ಯ ವಹಿಸಲಿದ್ದು, ರಾಷ್ಟ್ರೀಯ ಉಪ್ಪಾರ ಸಮಾಜದ ಅಧ್ಯಕ್ಷ ಶ್ರೀರಾಮುಲು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಉಪ್ಪಾರ ಸಮಾಜದ ಹಿರಿಯರು, ಮುಖಂಡರು ಹಾಗೂ ಮಹಿಳಾ ಮುಖಂಡರು ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ.
ಕಾರಣ ಈ ಕಾರ್ಯಕ್ರಮಕ್ಕೆ ಆಗಮಿಸಿ ನಿಗದಿತ ಶುಲ್ಕ ಪಾವತಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದರ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಹೆಚ್ಚಿನ ಮಾಹಿತಿಗಾಗಿ ಮೊ.9448225046, 94480764158, 944988615 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.