ಮೂಡಲಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟೀಯ ಭಾವೈಕ್ಯತಾ ಸಪ್ತಾಹ

Must Read

ಮೂಡಲಗಿ – ಪಟ್ಟಣದ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜ ಕಲ್ಯಾಣ ಇಲಾಖೆ, ಗೋಕಾಕ ಅವರ ಸಹಯೋಗದಲ್ಲಿ ಮಹಾವಿದ್ಯಾಲಯದ ಐ.ಕ್ಯೂ. ಎ. ಸಿ ಘಟಕದ ಅಡಿಯಲ್ಲಿ ವಿದ್ಯಾರ್ಥಿ ವೇತನ ವಿಭಾಗ ಹಾಗೂ ಪರಿಶಿಷ್ಟ ಜಾತಿ/ ಪಂಗಡ ಘಟಕದ ವತಿಯಿಂದ ರಾಷ್ರೀಯ ಭಾವೈಕ್ಯತಾ ಸಪ್ತಾಹದ ಅಂಗವಾಗಿ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ದೃಢೀಕರಣ ಕ್ಯಾಂಪ್ ಅನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಒಂದು ನೂರು ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ದೃಢೀಕರಣವನ್ನು ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ  ಮಹೇಶ ಕಂಬಾರ ಅವರು ಮಾತನಾಡುತ್ತ, ಮಹಾವಿದ್ಯಾಲಯದ ವಿದ್ಯಾರ್ಥಿ ವೇತನ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಶ್ಲಾಘಿಸಿ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಮಹತ್ವದ ಬಗ್ಗೆ ತಿಳಿಸಿದರು.

ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿ ವೇತನದ ಸಂಯೋಜಕರಾದ  ಚೇತನ್ ರಾಜ್ ಅವರು ಬಯೋಮೆಟ್ರಿಕ್ ದೃಢೀಕರಣ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ/ಪಂಗಡ ಘಟಕದ ಸಂಯೋಜಕರಾದ  ಸುಜಾತ ಪುಡ್ಲಕಟ್ಟಿ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಮೂಡಲಗಿಯ ಶ್ರೀ ವರ್ಣಾ ಕಮ್ಯೂನಿಕೇಶನ್ ಗ್ರಾಮ್ ಒನ್ ಕೇಂದ್ರದ  ಪ್ರಶಾಂತ ಹೊಸಮನಿ ಅವರು ತಾಂತ್ರಿಕ ಸಹಾಯ ಮಾಡಿದರು.

LEAVE A REPLY

Please enter your comment!
Please enter your name here

Latest News

ಕ್ರೀಡಾ ಚಟುವಟಿಕೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಪೂರಕ: ಬಸಗೌಡ ಪಾಟೀಲ

​ಮೂಡಲಗಿ: ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಅಲ್ಲದೆ, ಕ್ರೀಡೆಯು ಜೀವನದಲ್ಲಿ ಶಿಸ್ತು ಮತ್ತು ಒಗ್ಗಟ್ಟನ್ನು ಕಲಿಸುತ್ತದೆ ಎಂದು...

More Articles Like This

error: Content is protected !!
Join WhatsApp Group