ಹಾಸನ ನಗರದ ಲೇಖಕಿ, ಅಂಕಣಗಾರ್ತಿ, ಪತ್ರಕರ್ತೆ, ಸಾಮಾಜಿಕ ಚಿಂತಕಿ, ಸಮಾಜ ಸೇವಕಿ, ಕವಯತ್ರಿ ಬಹುಮುಖ ಪ್ರತಿಭೆಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಹೆಚ್.ಎಸ್. ಪ್ರತಿಮಾ ಹಾಸನ್ ರವರು ರಾಷ್ಟ್ರಮಟ್ಟದ ಸಾಹಿತ್ಯ ಸೌರಭ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆಂದು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾದಂತಹ ಮಧು ನಾಯಕ್ ಲಂಬಾಣಿ ರವರು ತಿಳಿಸಿದ್ದಾರೆ.
ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಹೆಚ್.ಎಸ್. ಪ್ರತಿಮಾ ಹಾಸನ್ ರವರು ಸಾಮಾಜಿಕ, ಸಾಂಸ್ಕೃತಿಕ ಸಾಹಿತಿಕ,ಶೈಕ್ಷಣಿಕವಾಗಿ ಇನ್ನೂ ಹಲವು ಕ್ಷೇತ್ರಗಳಲ್ಲಿ ಹಲವಾರು ಸಾಧನೆಗಳನ್ನು ಮಾಡಿದ್ದು ಎಲ್ಲಡೆಯು ಹೆಸರುವಾಸಿಯಾಗಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲಿ ವಿಭಿನ್ನ ಪ್ರಕಾರಗಳಲ್ಲಿ ಹಲವಾರು ಕೃತಿಗಳನ್ನು ಲೋಕಾರ್ಪಣೆಗೊಳಿಸಿದ್ದು. ಸಾಹಿತ್ಯ ಕೃಷಿಯಲ್ಲಿ ತನ್ನದೇ ಆದ ಅಸ್ತಿತ್ವವನ್ನು ಹೊಂದಿದ್ದು. ಪ್ರತಿನಿತ್ಯ ಒಂದಲ್ಲ ಒಂದು ಪ್ರಕಾರದಲ್ಲಿ ಪತ್ರಿಕೆಗಳಲ್ಲಿ ತನ್ನ ಬರವಣಿಗೆಯಲ್ಲಿ ತೊಡಗಿಕೊಂಡಿದ್ದು. ‘ದಿನಕ್ಕೊಂದು ಮುಕ್ತಕ’ ರಚಿಸಿ ಹೆಸರುವಾಸಿಯಾಗಿದ್ದಾರೆ. ನೂರಾರು ಪ್ರಶಸ್ತಿಗಳನ್ನು ಪಡೆದು ಸಾಹಿತ್ಯ ಕ್ಷೇತ್ರದ ಸೇವೆಯನ್ನು ಮಾಡುತ್ತಿದ್ದಾರೆ. ಹಲವಾರು ಸಂಘ-ಸಂಸ್ಥೆಗಳಲ್ಲಿ ಜಿಲ್ಲೆ ರಾಜ್ಯ ಮಟ್ಟದಲ್ಲಿ ಪದಾಧಿಕಾರಿಯಾಗಿದ್ದು ನಿಷ್ಕಲ್ಮಶವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಸಾಹಿತ್ಯದ ಪ್ರಕಾರಗಳಾದ ಮುಕ್ತಕ, ವೈಚಾರಿಕ ಲೇಖನ, ಗಜಲ್, ಚುಟುಕು, ಕವನ, ಕಥೆ, ನಾಟಕ, ಕಾದಂಬರಿ, ಟಂಕಾ, ಹಾಯ್ಕು, ಹೀಗೆ ಹಲವಾರು ಪ್ರಕಾರಗಳಲ್ಲಿ ಬರೆಯುತ್ತಿದ್ದು ಇವರ ಈ ಸೇವೆಯನ್ನು ಗುರುತಿಸಿ ರಾಷ್ಟ್ರಮಟ್ಟದ ಸಾಹಿತ್ಯ ಸೌರಭ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ದಿನಾಂಕ 16.03.2025 ರಂದು ಕರ್ನಾಟಕ ಸಂಘ ಶಿವಮೊಗ್ಗದಲ್ಲಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಲಾಗಿದೆ.
ಪ್ರಶಸ್ತಿಯನ್ನು ಪಡೆಯುತ್ತಿರುವ ಹೆಚ್. ಎಸ್.ಪ್ರತಿಮಾ ಹಾಸನ್ ರವರಿಗೆ ತಾಯಿ ನೀಲಮ್ಮ ಸುರೇಶ್, ಅಣ್ಣ ಮಂಜುನಾಥ ಹೆಚ್.ಎಸ್. ಕರ್ನಾಟಕ ರಾಜ್ಯ ಬರಹಗಾರ ಸಂಘದ ಗೌರವಾಧ್ಯಕ್ಷರಾದ ಗೊರೂರು ಅನಂತರಾಜುರವರು ಅಭಿನಂದನೆಗಳನ್ನು ತಿಳಿಸಿದ್ದಾರೆ.