Homeಸುದ್ದಿಗಳುಬೆಳಗಾವಿ ಕೇಂದ್ರ ಗ್ರಂಥಾಲಯದಲ್ಲಿ "ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ"

ಬೆಳಗಾವಿ ಕೇಂದ್ರ ಗ್ರಂಥಾಲಯದಲ್ಲಿ “ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ”

ಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯದಲ್ಲಿ ದಿ 12 ರಂದು “ರಾಷ್ಟ್ರೀಯ ಗ್ರಂಥಪಾಲಕರ ದಿನ”ಆಚರಿಸಲಾಯಿತು.

ಗ್ರಂಥಪಾಲಕರಾದ ಎಸ್ ಎಸ್ ಸೀಮಿಮಠ ಅವರು ಡಾ.ಎಸ್ ಆರ್ ರಂಗನಾಥನ್ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು ಮತ್ತು ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಂಥಾಲಯ ವಿಜ್ಞಾನವನ್ನು ಭಾರತದಾದ್ಯಂತ ಬೆಳೆಸುವಲ್ಲಿ, ಪ್ರಚಾರ ಮಾಡುವಲ್ಲಿ ಅವರೇ ಮೊದಲಿಗರು. ದೇಶದಲ್ಲಿ ಡಾ.ಎಸ್‌.ಆರ್‌.ರಂಗನಾಥನ್‌ರಷ್ಟು ಗ್ರಂಥಾಲಯದಲ್ಲಿ ಕೃಷಿ ಮಾಡಿದವರು ಮತ್ತೊಬ್ಬರಿಲ್ಲ. ಆದುದರಿಂದ ಅವರನ್ನು ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಎಂದು ಕರೆಯಲಾಗಿದೆ ಎಂದು ತಿಳಿಸಿದರು.

ಪ್ರಕಾಶ ಇಚಲಕರಂಜೀ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಂಥಪಾಲಕರ ದಿನಾಚರಣೆಯ ಮಹತ್ವ ಮತ್ತು ಆಚರಿಸುವ ಉದ್ದೇಶವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಅಧೀಕ್ಷಕರಾದ ಎ ಎ ಕಾಂಬಳೆ, ಆನಂದ ಮುತ್ತಗಿ,ಸುನಿಲ್, ಪದ್ಮಪ್ರಿಯಾ, ಐಹೊಳೆ, ಸಂಗೀತಾ, ಲತಾ ಎಂ, ವಿಜಯಲಕ್ಷ್ಮಿ, ಲಕ್ಷ್ಮಿ, ಪೂರ್ಣಿಮಾ, ಸರಸ್ವತೀ ಮತ್ತು ನಗರ ಜಿಲ್ಲಾ ಕೇಂದ್ರ ಗ್ರಂಥಾಲಯದ ಎಲ್ಲಾ ಸಿಬ್ಬಂದಿ,ಮತ್ತು ಗ್ರಂಥಾಲಯದ ಸಾರ್ವಜನಿಕ ಓದುಗರು,ವಿದ್ಯಾರ್ಥಿಗಳು ಹಾಜರಿದ್ದರು.

ಭಾರತದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಅವರ ಜನ್ಮದಿನವನ್ನು ಈ ದಿನ ಆಚರಿಸಲಾಗುತ್ತದೆ.ರಾಷ್ಟ್ರೀಯ ಗ್ರಂಥಪಾಲಕರ ದಿನದಂದು, ಗ್ರಂಥಪಾಲಕರ ಸೇವೆಯನ್ನು ಗುರುತಿಸಿ ಗೌರವಿಸಲಾಗುತ್ತದೆ.ಈ ದಿನದಂದು, ಅನೇಕ ಗ್ರಂಥಾಲಯಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಗ್ರಂಥಾಲಯಗಳ ಮಹತ್ವದ ಬಗ್ಗೆ ಅರಿವು ಮೂಡಿಸಲಾಗುತ್ತದೆ.

RELATED ARTICLES

LEAVE A REPLY

Please enter your comment!
Please enter your name here

Most Popular

error: Content is protected !!
Join WhatsApp Group