ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ

Must Read

ಅಥ್ಲೆಟಿಕ್ಸದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಪ್ರಜ್ವಲ ಗೋಣಿ ಇವರಿಗೆ ಸನ್ಮಾನ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟೀಯ ಕ್ರೀಡಾ ದಿನ ಆಚರಿಸುತ್ತ ದೇಶದ ಖ್ಯಾತ ಹಾಕಿಪಟು ಮೇಜರ್ ಧ್ಯಾನಚಂದ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಾಲೆಯ ಹಳೆಯ ವಿದ್ಯಾರ್ಥಿ ಪ್ರಜ್ವಲ ಗೋಣಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕ್ರೀಡಾಪಟುಗಳಿಗೆ ಶಿಸ್ತುಬದ್ಧ ದಿನಚರಿಯ ಜೊತೆಗೆ ಸೂಕ್ತವಾದ ಆಹಾರ ಕ್ರಮ ಅತ್ಯಗತ್ಯವಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ದುಶ್ಚಟಗಳಿಗೆ ಮತ್ತು ಮೊಬೈಲ್ ಗೀಳಿಗೆ ಬಲಿಯಾಗಬೇಡಿ ಎಂದು ಅವರು ಮಕ್ಕಳಿಗೆ ಕಿವಿಮಾತು ಹೇಳಿದರು. ಮೇಜರ್ ಧ್ಯಾನಚಂದ್ ಅವರ ಜೀವನ, ಸಾಧನೆ, ಕ್ರೀಡೆಗಳ ಮಹತ್ವ ಕುರಿತು ವಿದ್ಯಾ ಗರಗದ, ಪಲ್ಲವಿ ಸೂರ್ಯವಂಶಿ, ಅರ್ಪಿತಾ ಬೋಬಡೆ ಮಾತನಾಡಿದರು.

ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿಗಳಾದ ಮುತ್ತುರಾಜ ಜೋಗಿಗುಡ್ಡ, ಕಲ್ಮೇಶಗುಡ್ಡದ ಇವರಿಗೆ ಪ್ರಮಾಣಪತ್ರ ವಿತರಿಸಲಾಯಿತು.

ದೈಹಿಕ ಶಿಕ್ಷಣ ಶಿಕ್ಷಕರಾದ ಪಿ.ಎಸ್. ಗುರುನಗೌಡರ ಪ್ರಾಸ್ತಾವಿಕವಾಗಿ ಮಾತನಾಡಿ ನಿತ್ಯ ಯೋಗ, ಧ್ಯಾನದಿಂದ ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮವಾಗುತ್ತದೆ ಎಂದರು. ಸಮತೋಲಿತ ಆಹಾರ, ಉತ್ತಮ ನಿದ್ದೆ ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮುಖ್ಯ ಶಿಕ್ಷಕರಾದ ಎನ್.ಆರ್.ಠಕ್ಕಾಯಿ ಮಾತನಾಡಿ ಮೇಜರ್ ಧ್ಯಾನಚಂದ್ ಅವರು ಓಲಂಪಿಕ್ಸದಲ್ಲಿ ಮಾಡಿದ ಸಾಧನೆ ಭಾರತೀಯರಾದ ನಮ್ಮೆಲ್ಲರಿಗೂ ಅತ್ಯಂತ ಹೆಮ್ಮೆಯ ವಿಷಯ ಎಂದರು. ಕ್ರೀಡಾಸಾಧಕರ ಜೀವನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರಾದ ಜಗದೀಶ ನರಿ, ಶಿವಾನಂದ ಬಳಿಗಾರ, ವಿರೇಂದ್ರ ಪಾಟೀಲ, ಮಂಜುಳಾ ಕಾಳಿ, ಸಂತೋಷ ಸಾಳುಂಕೆ, ಜ್ಯೋತಿ ಅಳಗೋಡಿ, ಹಾಗೂ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮೂಗಪ್ಪ ನಾಗಣ್ಣವರ ಪ್ರಾರ್ಥಿಸಿದರು. ಭಾಗ್ಯಶ್ರೀ ಬಡಿಗೇರ ನಿರೂಪಿಸಿದರು. ಸಾನಿಕಾ ಕುಲಕರ್ಣಿ ಸ್ವಾಗತಿಸಿದರು. ಪಲ್ಲವಿ ಸೂರ್ಯವಂಶಿ ವಂದಿಸಿದರು.

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...

More Articles Like This

error: Content is protected !!
Join WhatsApp Group