- Advertisement -
ಮೈಸೂರಿನ ಅರವಿಂದನಗರದಲ್ಲಿರುವ ಶ್ರೀ ರಾಘವೇಂದ್ರ ಪ್ರತಿಷ್ಠಾನ ಇವರು ಹೊರತಂದಿರುವ ಅಮೋಘ ವರ್ಷ ದಿನದರ್ಶಿನಿ ೨೦೨೫ ಅನ್ನು ಮಂತ್ರಾಲಯದ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ ತೀರ್ಥ ಶ್ರೀಪಾದಂಗಳವರು ಇಂದು ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಮೈಸೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಸ್.ನಾಗರಾಜ ಹಾಗೂ ಮಠದ ಶಿಷ್ಯಂದಿರು ಉಪಸ್ಥಿತರಿದ್ದರು.