ಚಚಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ವೈದ್ಯಾಧಿಕಾರಿ ಡಾ.ಶಶಿಧರ ದೊಡ್ಡನಗೌಡರಿಗೆ ಸನ್ಮಾನ

Must Read

ಬೈಲಹೊಂಗಲ – ಬಾಗಲಕೋಟ ಜಿಲ್ಲೆಯ ಹುನಗುಂದ ತಾಲ್ಲೂಕಿನ ಹಿರೇಆದಾಪೂರ ಗ್ರಾಮದ ಗಣ್ಯ ಮನೆತನದ ಡಾ.ಶಶಿಧರ ಶರಣಪ್ಪಗೌಡ ದೊಡ್ಡನಗೌಡರ ಅವರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುರಗೋಡ ಹೋಬಳಿಯ ಬೈಲಹೊಂಗಲ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ಚಚಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಿಮಿತ್ತ ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲ್ಲೂಕಿನ ಗೌರವ ಕೋಶಾಧ್ಯಕ್ಷರಾದ ಮಹೇಶ ವೀರಭದ್ರಪ್ಪ ಕೋಟಗಿ (ಉಡಿಕೇರಿ) ಅವರು ಬೈಲಹೊಂಗಲ ಪಟ್ಟಣದ ಮಹಾಂತ ಮೋಟಾರ್ಸ ಆವರಣದಲ್ಲಿ ಗೌರವಿಸಿ,ಅಭಿನಂದಿಸಿ, ಶುಭ ಕೋರಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶಶಿಧರ ಶರಣಪ್ಪಗೌಡ ದೊಡ್ಡನಗೌಡರ ಅವರು ಗ್ರಾಮೀಣ ಪ್ರದೇಶದಿಂದ ಬಂದ ನಾನು ಜನಪ್ರತಿನಿಧಿಗಳ ಹಾಗೂ ಚಚಡಿ ಗ್ರಾಮದ ಗುರು-ಹಿರಿಯರ ಸಹಕಾರದಿಂದ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನಾಗಿ ಮಾಡಲು ಶ್ರಮಿಸುತ್ತೇನೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ,ಗುರು ಬಸವ ಬಳಗದ ಜಿಲ್ಲಾ ಸಂಚಾಲಕರಾದ ಮಹಾಂತೇಶ ಬ.ತೋರಣಗಟ್ಟಿ, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ವಿನೋದ ಮೂಗಬಸವ (ಹೊಸೂರ),ವೈದ್ಯ ವಿದ್ಯಾರ್ಥಿ ಪ್ರಜ್ವಲಕುಮಾರ ಮಹಾಂತೇಶ ತೋರಣಗಟ್ಟಿ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group