spot_img
spot_img

ಮತದಾನದಿಂದ ಯಾರೂ ಹೊರಗುಳಿಯಬಾರದು – ಸನಮುರಿ

Must Read

spot_img
- Advertisement -

ಮೂಡಲಗಿ: ಮತದಾರರು ಪ್ರಜಾಪ್ರಭುತ್ವದ ವ್ಯವಸ್ಥೆಯ ನಿರ್ಮಾಪಕರು ಹಾಗಾಗಿ ಯಾರು ಕೂಡಾ ಮತದಾನದಿಂದ ಮತ್ತು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ತಹಶೀಲ್ದಾರ ಮಹಾದೇವ ಸನಮುರಿ ಹೇಳಿದರು.

ರವಿವಾರದಂದು ಸಮೀಪದ ಗುರ್ಲಾಪೂರ ಕ್ರಾಸ್ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯ ಬಸ್ ನಿಲ್ದಾಣದಲ್ಲಿ ಮತದಾರ ನೋಂದಣಿ ಹಾಗೂ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿ, ಡಿಸೆಂಬರ 9ರವರೆಗೆ ಪರಿಷ್ಕರಣೆಗೆ ಅವಕಾಶವಿದ್ದು, ಅರ್ಹ ಹೊಸ ಮತದಾರರು ನಿಗದಿತ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರಿಸಿಕೊಳ್ಳಬಹುದು. ಜೊತೆಗೆ ಪೋಟೋ ಬದಲಾವಣೆ, ವಿಳಾಸ ಬದಲಾವಣೆ ಸೇರಿ ಎಲ್ಲಾ ರೀತಿಯ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಈ ಅವಕಾಶವನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಬಿಇಒ ಅಜೀತ ಮನ್ನಿಕೇರಿ, ತಾಪಂ ಎಡಿ ಸಂಗಮೇಶ ರೋಡನ್ನವರ, ತಹಶೀಲ್ದಾರ ಕಚೇರಿಯ ಸಿಬ್ಬಂದಿಗಳಾದ ಪಿ ಎಸ್ ಕುಂಬಾರ, ರಾಕೇಶ ಢವಳೇಶ್ವರ, ದುಂಡಪ್ಪ ಗೋಪಾಳಿ ಹಾಗೂ ಸಾರ್ವಜನಿಕರು ಇದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

10ರಂದು ಅಬ್ಬಿಗೇರಿ ದಂಪತಿಯ 15 ಕೃತಿ ಲೋಕಾರ್ಪಣೆ

ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘ ಬೆಳಗಾವಿ ಹಾಗೂ ಲೋಕವಿದ್ಯಾ ಪ್ರಕಾಶನ ಸಂಕೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಉಪನ್ಯಾಸಕಿ, ಲೇಖಕಿ ಜಯಶ್ರೀ ಮತ್ತು ಜಯಪ್ರಕಾಶ ಅಬ್ಬಿಗೇರಿ ದಂಪತಿಗಳ...
- Advertisement -

More Articles Like This

- Advertisement -
close
error: Content is protected !!
Join WhatsApp Group