- Advertisement -
ಸಿಂದಗಿ: ಕನ್ನಡ ಜಾನಪದ ಪರಿಷತ್ತಿನ ಸಿಂದಗಿ ತಾಲೂಕು ಘಟಕದ ನೂತನ ಅಧ್ಯಕ್ಷರನ್ನಾಗಿ ಉಪನ್ಯಾಸಕ ಮಹಾಂತೇಶ ನೂಲಾನವರ ಅವರನ್ನು ಆಯ್ಕೆಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಆದೇಶ ಹೊರಡಿಸಿದ್ದಾರೆ.
ಜಾನಪದ ಕಲೆಗಳ ಕ್ಷೇತ್ರ ಕಾರ್ಯ, ದಾಖಲೀಕರಣ, ತರಬೇತಿ ಮೂಲಕ ಜಾನಪದ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಿಯಾಶೀಲರಾಗಿ ಮತ್ತು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ ಎಂದು ಕಜಾಪ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.