‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಸಭೆಯಲ್ಲಿ ಮೊಬೈಲ್ ನಲ್ಲಿ ಮುಳುಗಿದ ಅಧಿಕಾರಿಗಳು

0
2167

ಬೀದರ – ಬೀದರ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಚಾಂಗಲೇರಾ ಗ್ರಾಮದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅಹವಾಲು ಸ್ವೀಕಾರ ಮಾಡಲು ಎಲ್ಲ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮತ್ತು ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ನಡೆಸಲಾಯಿತು.

ಜಿಲ್ಲಾಧಿಕಾರಿ ಮತ್ತು ಶಾಸಕರು ಜನ ಸಾಮಾನ್ಯರ ಸಮಸ್ಯೆ ಕೇಳುತ್ತಾ ಇದ್ದರೆ ,ಇನ್ನೊಂದೆಡೆ ಕೆಲ ಅಧಿಕಾರಿಗಳು ಈ ಸಭೆ ನಮಗೆ ಸಂಬಂಧವೆ ಇಲ್ಲ ಎನ್ನುವಂತೆ ಪ್ರಾರಂಭದಿಂದ ಮುಕ್ತಾಯದವರೆಗೆ ಮೊಬೈಲ್ ಫೋನಿನಲ್ಲಿ ಕೈ ಆಡಿಸುತ್ತಾ ಕುಳಿತಿರುವುದು ಕಂಡು ಬಂದಿದೆ.

ಜಿಲ್ಲಾಧಿಕಾರಿಗಳ ಸಭೆಯಲ್ಲಿಯೇ ಅಧಿಕಾರಿಗಳು ತಮ್ಮ ಕರ್ತವ್ಯ ಪಾಲನೆ ಮರೆತಿರುವುದನ್ನ ನೋಡಿದರೆ,ಇನ್ನೂ ತಮ್ಮ ಕಚೇರಿಯಲ್ಲಿ ಯಾವ ರೀತಿ ಕರ್ತವ್ಯ ನಿರ್ವಹಿಸುತ್ತಾರೋ ಎಂಬುದು ಪ್ರಶ್ನೆಯಾಗಿ ಉಳಿಯುತ್ತದೆ.

ಈ ರೀತಿ ಫೋನಿನಲ್ಲಿ ಚಾಟ್ ಮಾಡುತ್ತಾ ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಜಿಲ್ಲಾ ಅಧಿಕಾರಿ ಕ್ರಮ ಜರುಗಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ