spot_img
spot_img

ಎಸ್ ಸಿ ಎಸ್ ಟಿಗೆ ಮಂಜೂರಾದ ಮನೆಗಳು ಬೇರೆಯವರಿಗೆ ನೀಡಿದ ಅಧಿಕಾರಿಗಳು

Must Read

- Advertisement -

ತಹಶೀಲ್ದಾರರಿಗೆ ದೂರು ನೀಡಿದ ಬಿಜೆಪಿ ಕಾರ್ಯಕರ್ತರು

ಸಿಂದಗಿ; ಎಸ್.ಸಿ. ಹಾಗೂ ಎಸ್.ಟಿ ಸಮುದಾಯಕ್ಕೆ ಮೀಸಲಿದ್ದ ಮನೆಗಳನ್ನು ಅಕ್ರಮವಾಗಿ ಬೇರೆ ವರ್ಗದವರಿಗೆ ಹಂಚಿಕೆ ಮಾಡಿದ ಅಧಿಕಾರಿಗಳ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅದ್ಯಕ್ಷ ಅಶೋಕ ಅಲ್ಲಾಪೂರ ಮಾತನಾಡಿ, ಪಟ್ಟಣಕ್ಕೆ ೭೫೦ ಮನೆಗಳು ಮತ್ತು ಎಸ್.ಸಿ. ಹಾಗೂ ಎಸ್.ಟಿ ಪಂಗಡಕ್ಕೆ ೧೮೧ ಮನೆಗಳು ಮಂಜೂರಾಗಿರುತ್ತವೆ ಆದರೆ ಪುರಸಭೆ ಅಧಿಕಾರಿಗಳು ಹಾಗೂ ಪಟ್ಟಬದ್ಧ ಹಿತಾಸಕ್ತಿವುಳ್ಳ ಜನಪ್ರತಿನಿಧಿಗಳ ದುರಾಡಳಿತದಿಂದ ಎಸ್.ಸಿ. ಹಾಗೂ ಎಸ್.ಟಿ ಸಮುದಾಯದ ಫಲಾನುಭವಿಗಳಿಗೆ ಮೀಸಲಿದ್ದ ಮನೆಗಳನ್ನು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಆಯ್ಕೆ ಮಾಡಲಾಗಿದೆ. ಅಲ್ಲದೇ ಠರಾವು ಪತ್ರದಲ್ಲಿ ಇರುವ ಫಲಾನುಭವಿಗಳೆ ಬೇರೆ ಇದ್ದು ಆನಲೈನ್ನಲ್ಲಿ ಆಯ್ಕೆಗೊಂಡ ಫಲಾನುಭವಿಗಳೆ ಬೇರೆ ಇರುತ್ತಾರೆ. ಸಾಮಾನ್ಯ ವರ್ಗದ ಫಲಾನುಭವಿಗಳನ್ನು ನೇರವಾಗಿ ಆಯ್ಕೆ ಮಾಡಿರುತ್ತಾರೆ. ಈ ಘಟನೆಯನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಮನೆಗಳ ಹಂಚಿಕೆಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡ ಜಿಲ್ಲಾ ನಗರಾಭಿವೃದ್ಧಿ ಕೋಶ, ಅಧಿಕಾರಿಗಳು ಹಾಗೂ ಈ ಬಗ್ಗೆ ತನಿಖೆ ನಡೆಸಿದ ತನಿಖಾ ತಂಡದಲ್ಲಿ ಹಲವು ಲೋಪ ದೋಷಗಳಿದ್ದು ಸದರೀ ಪ್ರಕರಣದ ನಿಷ್ಪಕ್ಷಪಾತ ತನಿಖೆಗಾಗಿ ಜಾರಿ ನೀರ್ದೇಶನಾಲಯ ವಿಜಯಪೂರ ಇವರ ನೇತ್ರತ್ವದಲ್ಲಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಈ ಪ್ರಕರಣದಲ್ಲಿ ಭಾಗಿಯಾದ ಎಲ್ಲರ ಮೇಲೂ ಅಟ್ರಾಸಿಟಿ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಇಲ್ಲದಿದ್ದರೆ ಜಿಲ್ಲೆಯಾಧ್ಯಂತ ಕಾನೂನಾತ್ಮಕ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

- Advertisement -

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಗುರು ತಳವಾರ, ಸಿದ್ರಾಮ ಆನಗೊಂಡ, ಯುವ ಮೋರ್ಚಾ ಮಂಡಲ ಅಧ್ಯಕ್ಷ ಅಶೋಕ ನಾರಾಯಣಪುರ, ರೈತ ಮೋರ್ಚಾ ಮೋರ್ಚಾ ಮಂಡಲ ಅಧ್ಯಕ್ಷ ಪೀರು ಕೇರೂರ, ಹಿಂದುಳಿದ ಮೋರ್ಚಾ ಮಂಡಲ ಅಧ್ಯಕ್ಷ ವಿಠಲ ನಾಯ್ಕಡಿ, ಜಿಪಂ ಮಾಜಿ ಸದಸ್ಯ ಬಿ.ಆರ್.ಯಂಟಮಾನ, ಖಾಜು ಬಂಕಲಗಿ, ಸಿದ್ದು ಪೂಜಾರಿ, ಭೀಮು ಮೇಲಿನಮನಿ, ರವಿ ಯಂಪೂರೆ, ಪುರಸಭೆ ಸದಸ್ಯ ಮಹಾಂತಗೌಡ ಬಿರಾದಾರ, ಬಸವರಾಜ ಐರೋಡಗಿ, ಸಾಯಬಣ್ಣ ದೇವರಮನಿ ಸೇರಿದಂತೆ ಅನೇಕರಿದ್ದರು.

- Advertisement -
- Advertisement -

Latest News

ಸಮುದ್ರ ವಿಹಾರ ತಂದಿತು ಜೀವಕ್ಕೆ ಕುತ್ತು; ನೋಡನೋಡುತ್ತಲೇ ಮುಳುಗಿದ ಬೋಟ್

ಗೋವಾದಂಥ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ಕೊಟ್ಟಾಗ ಅಲ್ಲಿನ ಸಮುದ್ರದಲ್ಲಿ ವಿಹಾರ ಮಾಡುವುದು ಅತ್ಯಂತ ಹೆಚ್ಚಿನ ಬೇಡಿಕೆಯಾಗಿರುತ್ತದೆ. ಹಾಗೆಯೇ ಗೋವಾದಲ್ಲಿ ನಡೆದಿದೆಯೆಂದು ಹೇಳಲಾದ ಬೋಟ್ ಪಯಣ ಅದರ...
- Advertisement -

More Articles Like This

- Advertisement -
close
error: Content is protected !!
Join WhatsApp Group