ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಹಳೆಯ ವಿದ್ಯಾರ್ಥಿಗಳು ಸಹಕರಿಸಬೇಕು – ಡಾ. ಭೇರ್ಯ ರಾಮಕುಮಾರ್ ಕರೆ

0
310

ಹಂಪಾಪುರ ಸರ್ಕಾರಿ ಪ್ರೌಡ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ಉದ್ಘಾಟನೆ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದು ಉತ್ತಮ ಬದುಕು ಕಟ್ಟಿಕೊಂಡ ಹಳೆಯ ವಿದ್ಯಾರ್ಥಿಗಳು ತಾವು ಶಿಕ್ಷಣ ಪಡೆದ ಶಾಲೆಗಳ ಅಭಿವೃದ್ಧಿಗೆ ಸಹಕರಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ. ಭೇರ್ಯ ರಾಮಕುಮಾರ್ ಕರೆನೀಡಿದರು.

ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಹಂಪಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2007-2008 ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬದುಕು ಕಟ್ಟಿಕೊಟ್ಟ ತಂದೆ ತಾಯಿ, ಅಕ್ಷರ ಕಲಿಸಿದ ಗುರು, ಶಿಕ್ಷಣ ನೀಡಿದ ವಿದ್ಯಾ ಸಂಸ್ಥೆ ಗಳನ್ನು ಯಾರೂ ಮರೆಯ ಬಾರದು .ತಾವು ವಿದ್ಯೆ ಕಲಿತ ಸಂಸ್ಥೆಗಳ ಅಭಿವೃದ್ಧಿಗೆ ಶ್ರಮಿಸಬೇಕು.ಆಗ ಅವರ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಹಳೆಯ ವಿದ್ಯಾರ್ಥಿ ಸಂಘದ ಸಂಚಾಲಕ ರಕ್ಷಿತ್ ಎಸ್ . ಎಸ್ ಎಲ್ ಸಿ ಅತ್ಯುತ್ತಮ ಅಂಕ ಗಳಿಸಿದ ಗಗನಶ್ರೀ, ಕಾವ್ಯಶ್ರೀ, ತನುಶ್ರೀ ಇವರನ್ನು ಸನ್ಮಾನಿಸಿ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ತಂದೆ ತಾಯಿಯರು ಅನುಕ್ಷಣ ಶ್ರಮ ಪಡುತ್ತಾರೆ.ಮಕ್ಕಳು ಅದನ್ನು ಅರಿತು, ಶಿಕ್ಷಕರ ಅಮೂಲ್ಯ ಸಲಹೆಗಳನ್ನು ಪಾಲಿಸಿ ಬದುಕಿನಲ್ಲಿ ಸಾಧನೆ ಮಾಡಬೇಕೆಂದು ನುಡಿದರು.

ಅತಿ ಹೆಚ್ಚು ಶಿಕ್ಷಣ ಪಡೆಯದ ಎಡಿಸನ್, ವಿಲಿಯಂ ಶೇಕ್ಸ್ಪಿಯರ್ ಮೊದಲಾದವರ ಜೀವನ ಹಾಗೂ ಸಾಧನೆಗಳನ್ನು ವಿವರಿಸಿದ ಅವರು ಕೊನೆ ಬೆಂಚಿನ ವಿದ್ಯಾರ್ಥಿಗಳು ಸಮಾಜವೇ ಅಚ್ಚರಿ ಪಡುವಂತೆ ಬದುಕಿರುವ ಸಾವಿರ ನಿದರ್ಶನಗಳಿವೆ. ವಿದ್ಯಾರ್ಥಿಗಳು ನಿರಂತರ ಪರಿಶ್ರಮ, ಸಮಯ ಪ್ರಜ್ಞೆ,ಏಕಾಗ್ರತೆ ಗಳನ್ನು ಅಳವಡಿಸಿಕೊಂಡು ಪ್ರಗತಿ ಸಾಧಿಸಬೇಕು ಎಂದು ಕಿವಿಮಾತು ನುಡಿದರು.

ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ. ಭೇರ್ಯ ರಾಮ ಕುಮಾರ್ , ಶಾಲಾ ಮುಖ್ಯ ಶಿಕ್ಷಕರಾದ ಕಿರಣ್ ಕುಮಾರ್, ಎಸ್.ಎಸ್.ಎಲ್. ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕರಾದ ಕಿರಣ್ ಕುಮಾರ್ ಮಾತನಾಡಿ, ಶಾಲೆಯ ಹಳೆಯ ವಿದ್ಯಾರ್ಥಿಗಳು ಒಟ್ಟುಗೂಡಿ ಶಾಲೆಯ ಅಭಿವೃದ್ಧಿಗೆ ಸಹಕರಿಸಲು ನಿರ್ಧರಿಸಿರುವ ಕ್ರಮ ಶ್ಲಾಘನೀಯ .ಶಾಲೆಯ ಎಲ್ಲಾ ಹಳೆಯ ವಿದ್ಯಾರ್ಥಿಗಳೂ ಸಂಘಟಿತ ರಾಗಿ ತಾವು ಶಿಕ್ಷಣ ಪಡೆದ ಶಾಲೆಯ ಯಶಸ್ಸಿಗೆ ಸಹಕಾರ ನೀಡಬೇಕು. ಇದಕ್ಕೆ ಎಂದೆಂದಿಗೂ ತಮ್ಮ ಬೆಂಬಲ ಇರುತ್ತದೆ ಎಂದು ನುಡಿದರು.

ಶಿಕ್ಷಕರಾದ ನಿರ್ಮಲ ಸ್ವಾಗತಿಸಿದರು.ಅನಿಷ ಫಾತಿಮಾ ಕಾರ್ಯಕ್ರಮ ನಿರ್ವಹಿಸಿದರು.ಸುಗುಣ ವಂದನಾರ್ಪಣೆ ಮಾಡಿದರು.ಶಿಕ್ಷಕರಾದ ಜಗದೀಶ್, ನಟರಾಜ್, ವೇದ,ಸುರೇಶ್, ಸುನಂದಾ ,2007-2008 ರ ಹಳೆಯ ವಿದ್ಯಾರ್ಥಿಗಳಾದ ಶಿವಶಂಕರ್,ಮಂಜುನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.