ಶ್ರೀಮಧ್ವ ಜಯಂತಿ ಅಂಗವಾಗಿ ವ್ಯಾಸ-ದಾಸ ಸಾಹಿತ್ಯದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ವಿದ್ವನ್ಮಣಿಗಳಿಗೆ ಬೆಂಗಳೂರು ಚಾಮರಾಜಪೇಟೆ ಶ್ರೀಮನ್ಮಾಧ್ವ ಸಂಘದಲ್ಲಿ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.5ರಂದು ಸಂಜೆ 6.00ಗಂಟೆಗೆ ವಿಶ್ವ ಮಧ್ವಮತ ವೆಲ್‍ಫೇರ್ ಅಸೋಸಿಯೇಷನ್ ಆಯೋಜಿಸಿದೆ.
ಕನ್ನಡನಾಡಿನ ಹೆಮ್ಮೆಯ ಆಚಾರ್ಯರಾದ ವಿಶ್ವಗುರು ಮಧ್ವಾಚಾರ್ಯರ ಸಂದೇಶದ ಪ್ರಸಾರ ತನ್ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕೈಂಕರ್ಯ ಮಾಡುತ್ತಿರುವ ವಿಎಂಡ್ಲ್ಯೂಎ ವತಿಯಿಂದ ಈ ಸಮಾರಂಭ ಏರ್ಪಡಿಸಿದ್ದು, ಅಂದು ಸಂಜೆ 3,00 ರಿಂದ 5.30 ರವರೆಗೆ ಗಾಂಧಿ ಬಜಾರ್ ಸೋಸಲೇ ವ್ಯಾಸರಾಜ ಮಠದಿಂದ ಚಾಮರಾಜಪೇಟೆ ಶ್ರೀಮನ್ಮಾಧ್ವ ಸಂಘದವರೆಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ.
ಸಭಾ ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಮುಳಬಾಗಿಲು ಶ್ರೀಪಾದರಾಜ ಮಠದ ಶ್ರೀ ಸುಜಯನಿಧಿ ತೀರ್ಥರು ಹಾಗು ಬಾಳಗಾರು ಶ್ರೀಆರ್ಯ ಅಕ್ಷೋಭ್ಯ ತೀರ್ಥ ಮಠದ ಶ್ರೀ ಅಕ್ಷೋಭ್ಯರಾಮಪ್ರಿಯ ತೀರ್ಥರು ವಹಿಸುವರು. ಬಸವನಗುಡಿ ಶಾಸಕ ಎಲ್.ಎ.ರವಿಸುಬ್ರಮಣ್ಯ, ಚಿಕ್ಕಪೇಟೆ ಶಾಸಕ ಉದಯಗರುಡಾಚಾರ್ , ಗರುಡಾ ಫೌಂಡೇಷನ್ ಮುಖ್ಯಸ್ಥೆ ಮೇದಿನಿ ಉದಯಗರುಡಾಚಾರ್, ಎಕೆಬಿಎಂಎಸ್ ಉಪಾಧ್ಯಕ್ಷ , ನಿವೃತ್ತ ಪೊಲೀಸ್ ಆಯುಕ್ತ ಭಾಸ್ಕರ ರಾವ್ , ಸಮಾಜ ಸೇವಕ ಅರಮನೆ ಶಂಕರ್, ವಿಎಚಿಡ್ಲ್ಯೂಎ ಉಪಾಧ್ಯಕ್ಷ ಡಾ.ಡಿ.ಶ್ರೀನಾಥ್ , ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಮುಖ್ಯಅತಿಥಿಗಳಾಗಿ ಭಾಗವಹಿಸುವರು.
ವ್ಯಾಸ-ದಾಸ ಸಾಹಿತ್ಯದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ವಿದ್ವನ್ಮಣಿಗಳಾದ ಮೈಸೂರಿನ ಹಿರಿಯ ಹರಿದಾಸ ಸಂಶೋಧಕರಾದ ಡಾ.ಟಿ.ಎನ್ ನಾಗರತ್ನ , ನ್ಯಾಷನಲ್ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಜಯಸಿಂಹ(ತಿರುಮಲೇಶ ಹರಿವಿಠಲದಾಸರು), ಹರಿದಾಸ ಸಾಹಿತ್ಯ ಪ್ರಚಾರಕರು ಸರೋಜಮ್ಮ , ಖ್ಯಾತ ಚಲನಚಿತ್ರ ನಿರ್ದೇಶಕ ಡಾ.ಮಧುಸೂದನ ಹವಲ್ದಾರ್ ಮತ್ತು ಖ್ಯಾತ ಗಮಕಿ – ವ್ಯಾಖಾನಕಾರ ಡಾ.ಎ.ವಿ.ಪ್ರಸನ್ನ ಕೆಎಎಸ್ ರವರುಗಳಿಗೆ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ವಿಎಂಡ್ಲ್ಯೂಎ ಸಂಸ್ಥಾಪಕ ಅಧ್ಯಕ್ಷ ಬಿ.ಕೆ.ವೆಂಕೋಬ ರಾವ್ ವಿವರಗಳಿಗೆ: 91138 53325