spot_img
spot_img

ಜೂನ್ 26 ರಂದು ಡಾ. ಫಕೀರನಾಯ್ಕ ಗಡ್ಡಿಗೌಡರ ಅವರ ನಾಲ್ಕು ಕೃತಿಗಳ ಲೋಕಾರ್ಪಣೆ

Must Read

ಬೈಲಹೊಂಗಲ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪಟ್ಟಣದ ಶ್ರೀ ಶಿವಬಸವ ಮಹಾಸ್ವಾಮಿಗಳ ಕಲ್ಯಾಣ ಮಂಟಪದಲ್ಲಿ ರವಿವಾರ ಜೂನ 26 ರಂದು ಬೆಳಿಗ್ಗೆ 10 ಗಂಟೆಗೆ ಬೈಲಹೊಂಗಲದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಫಕೀರನಾಯ್ಕ ದುಂಡಪ್ಪ ಗಡ್ಡಿಗೌಡರ ಅವರ ‘ತಲ್ಲಣಗಳ ನಡುವೆ ನೆಮ್ಮದಿಯ ಹುಡುಕಾಟ’, ‘ಪ್ರೇಮ ಪರ್ವ’, ‘ವಚನ ಭಾಸ್ಕರ’ ಹಾಗೂ ‘ವಾಸ್ತವದ ಹತ್ತಿರ’ ಎಂಬ ನಾಲ್ಕು ಕೃತಿಗಳ ಲೋಕಾರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಬೈಲಹೊಂಗಲದ ಶಾಖಾ ಮೂರು ಸಾವಿರ ಮಠದ ಪರಮ ಪೂಜ್ಯ ಶ್ರೀ ಮ.ನಿ.ಪ್ರ. ಪ್ರಭು ನೀಲಕಂಠ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು. ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಗುರಪ್ಪ ಬೆಲ್ಲದ ಕೃತಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಬೆಳಗಾವಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ಮಂಗಲಾ ಶ್ರೀಶೈಲ ಮೆಟಗುಡ ಅಧ್ಯಕ್ಷತೆ ವಹಿಸಲಿದ್ದಾರೆ.

ಬೈಲಹೊಂಗಲ ಶಾಸಕರಾದ ಮಹಾಂತೇಶ ಎಸ್. ಕೌಜಲಗಿ, ಕಿತ್ತೂರು ಶಾಸಕರಾದ ಮಹಾಂತೇಶ ಬ. ದೊಡಗೌಡರ, ಮಾಜಿ ಶಾಸಕರೂ, ಮಲಪ್ರಭಾ-ಘಟಪ್ರಭಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ವಿಶ್ವನಾಥ ಈ. ಪಾಟೀಲ, ಮಾಜಿ ಶಾಸಕರಾದ ಜಗದೀಶ ಮೆಟಗುಡ್ಡ, ಖ್ಯಾತ ಚಲನಚಿತ್ರ ನಟ-ನಿರ್ಮಾಪಕರಾದ ಶಿವರಂಜನ ಬೋಳಣ್ಣವರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಳಗಾವಿ ಜಿಲ್ಲಾಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ಹಾವೇರಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಅಶೋಕ ಗಡ್ಡಿಗೌಡರ, ಬೈಲಹೊಂಗಲದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಬಿ.ಕೆ.ಮದವಾಲ ಮುಖ್ಯ ಅತಿಥಿಗಳಾಗಿ ಆಗಮಿಸುವರು.

ಯರಗಟ್ಟಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರಾಜಶೇಖರ ಬಿರಾದಾರ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಪ್ರೇಮಕ್ಕಾ ಅಂಗಡಿ ಕೃತಿಗಳ ಪರಿಚಯ ಮಾಡಿಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಬೈಲಹೊಂಗಲ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಹಾಗೂ ಮಾರ್ಗದರ್ಶಕ ಮಂಡಳಿಯ ಸರ್ವ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಕಸಾಪ ತಾಲೂಕಾಧ್ಯಕ್ಷ ಎನ್.ಆರ್.ಠಕ್ಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅನುರಾಧಾ ಜಗದೀಶ ಬಾಗನವರ, ಅಶ್ವಿನಿ ಜಗದೀಶ ಬಾಗನವರ, ಹಾರ್ಮೋನಿಯಂ ವಾದಕ ಮಂಜುನಾಥ ಸುಣಗಾರ (ತೇರದಾಳ), ತಬಲಾ ವಾದಕ ಬಸವರಾಜ ಗಜೇಂದ್ರಗಡ ಇವರಿಂದ ವಚನ ಗಾಯನ ನಡೆಯಲಿದೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಮಣ್ಣು ಉಳಿಸಿ ಹೋರಾಟಕ್ಕೆ ಬೆಂಬಲ ನೀಡೋಣ – ಅಶೋಕ ಅಲ್ಲಾಪೂರ

ಸಿಂದಗಿ - ಜಗತ್ತಿನ ಜೀವ ಸಂಕುಲಕ್ಕೆ ಆಶ್ರಯವಾದ ಭೂಮಿಯನ್ನು ಮತ್ತು ಮಣ್ಣನ್ನು ಉಳಿಸಿ ಮುಂದಿನ ಜನಾಂಗಕ್ಕೆ ಫಲವತ್ತಾದ ಭೂಮಿ ನೀಡಲು ಶ್ರೀ ಸದ್ಗುರು ಜಗ್ಗಿ ವಾಸುದೇವ್...
- Advertisement -

More Articles Like This

- Advertisement -
close
error: Content is protected !!