‘ಒಂದು ದೇಶ, ಒಂದು ಚುನಾವಣೆ’ ಸ್ವಾಗತಾರ್ಹ ನಿರ್ಧಾರ – ಈರಣ್ಣ ಕಡಾಡಿ

Must Read

ಮೂಡಲಗಿ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರಕಾರವು ‘ಒಂದು ದೇಶ, ಒಂದು ಚುನಾವಣೆ’ ನಿರ್ಣಯ ಒಂದು ಸಮರ್ಥ ನಿರ್ಧಾರ ಮಾತ್ರವಲ್ಲದೆ, ಚುನಾವಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.

ಗುರುವಾರ ಸೆ-19 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಮೊದಲ ಹಂತದಲ್ಲಿ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಮತ್ತು ಈ ಸಾರ್ವತ್ರಿಕ ಚುನಾವಣೆ ನಡೆದ 100 ದಿನಗಳ ಒಳಗೆ ಎರಡನೇ ಹಂತದಲ್ಲಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್, ಪುರಸಭೆ ಮತ್ತಿತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಉದ್ದೇಶವಿದೆ ಹಾಗೂ ಇದಕ್ಕೆ ಒಂದೇ ಮತದಾರರ ಪಟ್ಟಿ ಬಳಕೆಗೆ ಅವಕಾಶವಿದೆ ಎಂದು ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳು, ಚುನಾವಣಾ ಸ್ಪರ್ಧಿಗಳು, ಸಾವಿರಾರು ಕೋಟಿ ಹಣವನ್ನು ಖರ್ಚು ಮಾಡಬೇಕಾಗುತ್ತಿತ್ತು. ದೇಶದ ಹಣ ಉಳಿಸಿ ಅದನ್ನು ಅಭಿವೃದ್ಧಿಗೆ ಬಳಸಬೇಕು, ಬಹಳ ವೆಚ್ಚದಾಯಕ ಚುನಾವಣೆಯನ್ನು ಕಡಿಮೆ ವೆಚ್ಚದಾಯಕ ಚುನಾವಣೆಯನ್ನಾಗಿ ಮಾಡಬೇಕು ಎಂಬ ದೂರದೃಷ್ಟಿಯ ನಿರ್ಧಾರವಾಗಿದೆ. 1951, 1967 ರಲ್ಲಿ ಏಕಕಾಲಕ್ಕೆ ಚುನಾವಣೆ ನಡೆದಿತ್ತು. ಕಾನೂನು ಆಯೋಗವು 1999ರ ತನ್ನ 170ನೇ ವರದಿಯಲ್ಲಿ ಐದು ವರ್ಷಗಳಿಗೆ ಒಮ್ಮೆ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಸುವ ಕುರಿತು ತಿಳಿಸಿತ್ತು ಎಂದು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ ನೀಡಿದ ವರದಿಯಲ್ಲಿರುವ ಅಂಶಗಳ ಕುರಿತು ಸಂಸದ ಈರಣ್ಣ ಕಡಾಡಿ ಅವರು ವಿವರಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group