ಚಿಕ್ಕಸಿಂದಗಿ ಗ್ರಾಮದಲ್ಲಿ ಸಿಸಿ ರಸ್ತೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ
ಸಿಂದಗಿ- ಮಾತು ಸಾಧನೆಯಾಗಬಾರದು ಸಾಧನೆ ಮಾತಾಗಬೇಕು ಎಂಬ ನಿಟ್ಟಿನಲ್ಲಿ ಮತಕ್ಷೇತ್ರದ ಸಮಗ್ರ ಅಭಿವೃದ್ದಿಯನ್ನು ನಾನು ಪ್ರಾಮಾಣಿಕವಾಗಿ ಮಾಡುತ್ತೇನೆ. ಹಳ್ಳಿಗಳು ಅಭಿವೃದ್ದಿಯಾದರೆ ಮಾತ್ರ ಈ ದೇಶ ಅಭಿವೃದ್ದಿಯಾಗುತ್ತದೆ ನನ್ನ ಮೊದಲ ಆದ್ಯತೆ ಹಳ್ಳಿಯ ಕಡೆಗೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಅವರು ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಇಲಾಖೆ ವಿಜಯಪುರ, ಅನುಷ್ಠಾನ ಕೆ.ಆರ್.ಐ.ಡಿ.ಎಲ್. ವಿಜಯಪುರ, ೨೦೨೨-೨೩ ನೇ ಸಾಲಿನ ಸಿಂದಗಿ ತಾಲೂಕಿನ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ರೂ ೫೦ ಲಕ್ಷಗಳ ಅನುದಾನದಲ್ಲಿ ಸಿಸಿ ರಸ್ತೆಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಸಿಂದಗಿ ಮತ ಕ್ಷೇತ್ರದಲ್ಲಿ ಅನೇಕ ಹಳ್ಳಿಗಳಲ್ಲಿ ಮೂಲಭೂತ ಸೌಕರ್ಯಗಳಾದ ಶುದ್ದ ಕುಡಿಯುವ ನೀರು, ಉತ್ತಮ ಸಿಸಿ ರಸ್ತೆ ನಿರ್ಮಾಣ, ವಿದ್ಯುತ್ ಮತ್ತು ಶಿಕ್ಷಣ ಹಾಗೂ ಆರೋಗ್ಯದ ಕಡೆಗೆ ಹೆಚ್ಚು ಗಮನ ಸೆಳೆಯಲಾಗುತ್ತಿದೆ. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳ ಅಭಿವೃದ್ದಿಗೆ ಹೆಚ್ಚು ಒತ್ತು ನೀಡುತ್ತಿದ್ದು ಆ ನಿಟ್ಟಿನಲ್ಲಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಸಿಸಿ ರಸ್ತೆಯ ನಿರ್ಮಾಣದ ಕಾಮಗಾರಿ ಕಾರ್ಯ ಸಧ್ಯ ಪ್ರಾರಂಭವಾಗುತ್ತದೆ. ಮುಂದಿನ ದಿನಮಾನಗಳಲ್ಲಿ ತಾಲೂಕಿನ ಎಲ್ಲ ಗ್ರಾಮಗಳ ಪರಿಶಿಷ್ಟ ಜಾತಿ ಕಾಲೊನಿಗಳನ್ನು ನಾನು ಪ್ರಾಮಾಣಿಕವಾಗಿ ಅಭಿವೃದ್ದಿ ಪಡಿಸುವ ಕನಸನ್ನು ಹೊತ್ತುಕೊಂಡಿದ್ದೇನೆ ಎಂದ ಅವರು ಸಿಂದಗಿ ನಗರದಲ್ಲಿ ೨೪*೭ ಕುಡಿಯುವ ನೀರಿನ ವ್ಯವಸ್ಥೆ, ಹೊಸ ವಿದ್ಯುತ್ ಕಂಬಗಳ ಜೋಡಣೆ ಸೇರಿದಂತೆ ಹತ್ತು ಹಲವಾರು ಕಾಮಗಾರಿಯ ಭೂಮಿ ಪೂಜೆಯು ಇನ್ನು ಕೇಲವೆ ದಿನಗಳಲ್ಲಿ ಆರಂಭಗೊಳ್ಳಲಿವೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ತಾಲೂಕಾಧ್ಯಕ್ಷ ಸುರೇಶ ಪೂಜಾರಿ, ಶಿವಣ್ಣ ಕೋಟರಗಸ್ತಿ, ಚೇತನಗೌಡ ಪಾಟೀಲ ಯಂಕAಚಿ, ಚಿಕ್ಕಸಿಂದಗಿ ಗ್ರಾಮದ ರವಿಸ್ವಾಮಿ ಹತ್ತರಕಿಹಾಳಮಠ, ಚಂದ್ರಕಾಂತ ಬೂದಿಹಾಳ, ಶ್ರೀನಿವಾಸ ಓಲೇಕಾರ, ಮಲ್ಲಿಕಾರ್ಜುನ ಅವಟಿ, ಸಂಜೀವ ಬಮ್ಮನಹಳ್ಳಿ, ಪರುಶುರಾಮ ಬಗಲಿ, ಅಜೀಜ ಅವಟಿ, ಬಂದೇನಮಾಜ ಅವಟಿ, ಷಣ್ಮುಖ ಓಲೇಕಾರ, ನಾನಾಗೌಡ ನಾಗಾವಿ ಸೇರಿದಂತೆ ಇತರರು ಇದ್ದರು.