ಬೀದರ – ಬಿಎಸ್ಪಿ ನರ್ಸಿಂಗ್ ಪರೀಕ್ಷೆಯಲ್ಲಿ ಮಕ್ಕಳಿಗೆ ತೊಂದರೆಯಾಗಬಾರದೆಂಬ ನಿಟ್ಟಿನಲ್ಲಿ ಬ್ರಿಮ್ಸ್ ನಿರ್ದೇಶಕ ಡಾ. ಚಂದ್ರಕಾಂತ ಚಿಲ್ಲರ್ಗಿ ಹಿಜಾಬ್ ಗೆ ಅವಕಾಶ ನೀಡಿದ್ದಾರೆ.
ಬಿಎಸ್ಸಿ ನರ್ಸಿಂಗ್ ಮೈಕ್ರೋಬೈಯಾಲಜಿ ಪರೀಕ್ಷೆಗಳು ಇಂದು ನಡೆಯುತ್ತಿದ್ದು 65 ವಿದ್ಯಾರ್ಥಿಗಳು ಹಾಜರಾಗಿದ್ದು ಅದರಲ್ಲಿ 15 ವಿದ್ಯಾರ್ಥಿ ನಿಯರು ಹಿಜಾಬ್ ಹಾಕಿಕೊಂಡು ಬಂದಿದ್ದಾರೆ. ಹಿಜಾಬ್ ಹಾಕಿಕೊಂಡು ಬಂದವರಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ.
ಒಟ್ಟು 74 ವಿದ್ಯಾರ್ಥಿಗಳಲ್ಲಿ ಹತ್ತು ಜನ ಪರೀಕ್ಷೆಗೆ ಗೈರು ಹಾಜರಾಗಿದ್ದು 64 ಜನ ಪರೀಕ್ಷೆ ಬರೆಯುತ್ತಿದ್ದಾರೆ. ನಮ್ಮಲ್ಲಿ ಹಿಜಾಬ್ ಕುರಿತಂತೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಲ್ಲವೂ ಶಾಂತವಾಗಿದೆ ಎಂದು ನಿರ್ದೇಶಕರು ತಿಳಿಸಿದರು.
ವರದಿ: ನಂದಕುಮಾರ ಕರಂಜೆ,
ಟೈಮ್ಸ್ ಆಫ್ ಕರ್ನಾಟಕ, ಬೀದರ