spot_img
spot_img

ಡಾ. ಪುನೀತ ರಾಜಕುಮಾರ ಹುಟ್ಟುಹಬ್ಬದ ನಿಮಿತ್ತ ಅಂಗಾಂಗಗಳ ದಾನ ಕಾರ್ಯಕ್ರಮ

Must Read

- Advertisement -

ಮೂಡಲಗಿ – ಡಾ.ಪುನೀತ ರಾಜಕುಮಾರ ಹಾಗೂ ಬಾಲಚಂದ್ರ ಜಾರಕಿಹೊಳಿ ಅಭಿಮಾನಿ ಬಳಗದವರ ಸಂಯುಕ್ತ ಆಶ್ರಯದಲ್ಲಿ ಪುನೀತ ಹುಟ್ಟು ಹಬ್ಬದ ನಿಮಿತ್ತ ಅಂಗಾಂಗ ದಾನ ಕಾರ್ಯಕ್ರಮವನ್ನು ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡಲಗಿ ತಹಶೀಲ್ದಾರ ಡಿ ಜಿ ಮಹಾತ್ ವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಾನವನ ಅಂಗಾಂಗಗಳು ಹಾಗೂ ಅವುಗಳನ್ನು ದಾನ ಮಾಡುವುದರ ಮಹತ್ವ ತಿಳಿಸಿದರು.

- Advertisement -

ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ ಮಾತನಾಡಿ, ದಿ.ಪುನೀತ ರಾಜಕುಮಾರ ಅವರು ತಮ್ಮ ಜೀವಿತಾವಧಿಯಲ್ಲಿ ಹಮ್ಮಿಕೊಂಡಿದ್ದ ಜನೋಪಯೋಗಿ ಕಾರ್ಯಕ್ರಮಗಳನ್ನು ಅವರ ನಂತರ ಮುಂದುವರೆಸಿದ್ದು ತುಂಬಾ ಪ್ರಶಂಸನೀಯ ಎಂದರು.

ಕಾರ್ಯಕ್ರಮವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಕಾರ್ಯದರ್ಶಿ ನಾಗಪ್ಪ ಶೇಖರಗೋಳ ಉದ್ಘಾಟಿಸಿದರು.

- Advertisement -

ವೇದಿಕೆಯ ಮೇಲೆ ಸಿಪಿಐ ವೆಂಕಟೇಶ ಮುರನಾಳ, ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಎಫ್ ಜಿ ಚಿನ್ನನ್ನವರ, ಸಿಡಿಪಿಒ ವಾಯ್ ಕೆ ಗದಾಡಿ, ಮುಖ್ಯ ವೈದ್ಯಾಧಿಕಾರಿ ಭಾರತಿ ಕೋಣಿ ಉಪಸ್ಥಿತರಿದ್ದರು.

ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಪತ್ರಕರ್ತ ಮಲ್ಲು ಬೋಳನ್ನವರ ಮಾತನಾಡಿದರು.

ಎಡ್ವಿನ್ ಪರಸನ್ನವರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಹಲವು ಜನರು ತಮ್ಮ ಅಂಗಾಂಗ ದಾನ ಮಾಡುವುದಾಗಿ ವಾಗ್ದಾನ ಮಾಡಿದರು. ಅಂಥವರಿಗೆ ಪ್ರಮಾಣ ಪತ್ರಗಳನ್ನು ನಾಗಪ್ಪ ಶೇಖರಗೋಳ ವಿತರಿಸಿದರು.

ಸಮಾರಂಭದಲ್ಲಿ ಪುರಸಭೆಯ ಹಲವು ಸದಸ್ಯರುಗಳು, ಗಣ್ಯರು ಭಾಗವಹಿಸಿದ್ದರು.

- Advertisement -
- Advertisement -

Latest News

‘Silent killer’ ಎಂದು ಕರೆಯಲ್ಪಡುವ ಒಂದು ಹಾವುಂಟು !

ಈ ಹಾವನ್ನು ಈ ರೀತಿ ಕರೆಯಲು ಹಲವು ಕಾರಣಗಳುಂಟು. ಈ ಹಾವು ರಾತ್ರಿ ವೇಳೆಯಲ್ಲಿಯೇ ಹೆಚ್ಚು ಓಡಾಟ ಮಾಡುವುದು (ನಿಶಾಚರಿ). ಮತ್ತೆ ಈ ಹಾವು ಮನುಷ್ಯರಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group