spot_img
spot_img

ಗುಡಿ ಗುಂಡಾರ ಕಟ್ಟುವುದರಲ್ಲಿ ನಮ್ಮ ಜನ ಮುಂದು – ಸಚಿವೆ ಲಕ್ಷ್ಮಿ ಹೆಬ್ಬಾಳಕರ

Must Read

spot_img
- Advertisement -

ಮೂಡಲಗಿ: ಗುಡಿ, ಗಂಡಾರಗಳ ವೈಭವ ನೋಡುವುದಾದರೆ ಅರಬಾವಿ ಕ್ಷೇತ್ರದಲ್ಲಿ ನೋಡಬೇಕು. ಅಷ್ಟು ಚೆನ್ನಾಗಿ ಇಲ್ಲಿನ ದೇವಸ್ಥಾನಗಳು, ಮಹಾದ್ವಾರಗಳು ನಿರ್ಮಾಣವಾಗಿವೆ, ಇಲ್ಲಿನ ಜನರು ಯಾವ ಶಾಸಕರು, ಸಂಸದರು ದುಡ್ಡು ಕೊಡುತ್ತಾರೆ ಎಂದು ಕಾಯುವುದಿಲ್ಲ. ತಾವೇ ಕಿಸೆಯಿಂದ ದುಡ್ಡು ಹಾಕಿ ಗುಡಿ ಗುಂಡಾರ ಕಟ್ಟುತ್ತಾರೆ. ಅಷ್ಟು ದೊಡ್ಡ ಮನಸ್ಸಿರುವ ಜನರು ಇಲ್ಲಿನವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಪಟ್ಟಣದ ಮಡ್ಡಿ ವೀರಭದ್ರೇಶ್ವರ ಜಾತ್ರಾ ರಥೋತ್ಸವದ ನಿಮಿತ್ತ ನಡೆದ ಸತ್ಸಂಗ ಸಮ್ಮೇಳನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತ ೫ ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ಅತ್ಯಂತ ಶ್ರೀಮಂತ ಇತಿಹಾಸ ನಮ್ಮದು. ದೇಶದ ಹಳ್ಳಿ ಹಳ್ಳಿಗಳಲ್ಲಿ, ಗಲ್ಲಿಗಲ್ಲಿಗಳಲ್ಲಿ ಇರುವ ನಮ್ಮ ಸಂಸ್ಕೃತಿ ಇದಕ್ಕೆ ಕಾರಣ. ನಮ್ಮ ಮನೆಯಲ್ಲಿ ಬಂಗಾರವಿಲ್ಲದಿದ್ದರೂ ದೇವರ ಕಳಶಕ್ಕೆ ಬಂಗಾರ ಹಾಕುತ್ತೇವೆ ಅಂತಹ ಭಕ್ತಿ ನಮ್ಮದು ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ರಾಜ್ಯದ ನಮ್ಮ ಕಾಂಗ್ರೆಸ್ ಸರಕಾರ ಜನರಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಚುನಾವಣೆಯ ಫಲಿತಾಂಶಕ್ಕೂ ತಲೆಕೆಡಿಸಿಕೊಳ್ಳದೆ ಜನರಿಗೋಸ್ಕರ ತಂದಿರುವ ಐದೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸದೆ ಮುಂದುವರಿಸಲಾಗಿದೆ ಎಂದು ಅವರು ಹೇಳಿದರು

- Advertisement -

ಪಂಚ ಗ್ಯಾರಂಟಿ ಯೋಜನೆಗಳು ಜನರಿಗಾಗಿ ತಂದಿರುವ ಯೋಜನೆಗಳು. ಅವುಗಳನ್ನು ಜನರಿಗೋಸ್ಕರ ಮುಂದುವರೆಸಲಾಗಿದೆ. ಚುನಾವಣೆ ಫಲಿತಾಂಶಕ್ಕೂ ಇದಕ್ಕೂ ಸಂಬಂಧವಿಲ್ಲ. ಕಾಂಗ್ರೆಸ್ ಸರಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ ಎನ್ನುವುದನ್ನು ಸಚಿವರು ಸ್ಪಷ್ಟಪಡಿಸಿದರು.

ಈ ವರ್ಷ ದೇವರ ಆಶಿರ್ವಾದದಿಂದ ಮಳೆ, ಬೆಳೆ ಚೆನ್ನಾಗಿ ಆಗಿದೆ. ದೇವರ ಆಶಿರ್ವಾದ ನಿಮ್ಮ ಮೇಲಿರಲಿ. ಸಂತೃಪ್ತಿಯ ಜೀವನ ಎಲ್ಲರದ್ದಾಗಲಿ ಎಂದು ಆಶಿಸಿದ ಸಚಿವರು, ಸೆ.೩ರಂದು ವೀರಭದ್ರೇಶ್ವರ ಜಯಂತಿ ಅಂದು ಎಲ್ಲರೂ ಜಯಂತಿಯನ್ನು ಆಚರಣೆ ಮಾಡಬೇಕು ಎಂದರು.

ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಮಾತನಾಡಿದರು.

- Advertisement -

ಸಮಾರಂಭದಲ್ಲಿ ಹುಕ್ಕೇರಿ ಹಿರೇಮಠದ ಪ.ಪೂ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಮುಧೋಳದ ಪ.ಪೂ ಸಿದ್ದರಾಮ ಶಿವಯೋಗಿ ಮಹಾಸ್ವಾಮಿಗಳು, ಕಾಂಗ್ರೆಸ್ ಮುಖಂಡರಾದ ಅಶೋಕ ಪೂಜಾರಿ, ಮಹಾಂತೇಶ ಕಡಾಡಿ, ದೇವಸ್ಥಾನದ ಅಧ್ಯಕ್ಷ ಭೀಮಪ್ಪ ಹಂದಿಗುಂದ, ಭೀಮಪ್ಪ ಗಡಾದ, ಬಿ.ಬಿ.ಬೆಳಕೂಡ, ಲಗಮಣ್ಣ ಕಳಸಣ್ಣವರ, ರಾವಸಾಬ್ ಬೆಳಕೂಡ, ನಿಂಗಪ್ಪ ಪಿರೋಜಿ, ಎಂ.ಜಿ.ಗಾಣಿಗೇರ ಹಾಗೂ ದೇವಸ್ಥಾನ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಬೆಳಗಾವಿ ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಆಯ್ಕೆ

ಜಿಲ್ಲಾ ಕೃಷಿಕ ಚುನಾವಣೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರವೇಶ ; ಎಲ್ಲ ಸ್ಥಾನಗಳೂ ಅವಿರೋಧ ಆಯ್ಕೆ ರಾಜ್ಯ ಪ್ರತಿನಿಧಿಯಾಗಿ ಬಾಳಪ್ಪ ಬೆಳಕೂಡ ಆಯ್ಕೆ ಬೆಳಗಾವಿ- ಸಹಕಾರ ವಲಯದ ಜಿಲ್ಲಾ...
- Advertisement -

More Articles Like This

- Advertisement -
close
error: Content is protected !!
Join WhatsApp Group