ಸವದತ್ತಿ : ರಾಜ್ಯ ಹಾಗೂ ಕೇಂದ್ರ ಸರಕಾರಗಳು ಶಿಕ್ಷಣದ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಎಲ್ಲ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜೊತೆಗೆ ‘ನನ್ನ ಶಾಲೆ ನನ್ನ ಜವಾಬ್ದಾರಿ’ ಕೂಡ ವಿನೂತನ ಕಾರ್ಯಕ್ರಮ. ಗುಣಮಟ್ಟದ ಶಿಕ್ಷಣ ಹಾಗೂ ವೈಜ್ಞಾನಿಕ ಜ್ಞಾನ ವೃದ್ದಿಗೆ ಎಲ್ಲರ ಸಹಕಾರ ಕೂಡ ಮಹತ್ವದ್ದಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ನನ್ನ ಶಾಲೆ ನನ್ನ ಜವಾಬ್ದಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ನನ್ನ ಶಾಲೆ ನನ್ನ ಜವಾಬ್ದಾರಿ ಯೋಜನೆಯ ಮಹತ್ವವನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಆನಂದ ಬಡಕುಂದ್ರಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ ದಂಡಿನ ಸ್ವಾಗತದೊಂದಿಗೆ ಪ್ರಾಸ್ತಾವಿಕವಾಗಿ ಮಾತನಾಡಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಯೋಜನೆಯ ಅಧಿಕಾರಿಗಳಾದ ಮೈತ್ರಾದೇವಿ ವಸ್ತ್ರದ, ಎಪಿಎಂಸಿ ಅಧ್ಯಕ್ಷರಾದ ಚಂದ್ರು ಜಂಬ್ರಿ (ಪೂಜೇರ), ಕರ್ನಾಟಕ ಸರ್ಕಾರ ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಮಂಜುನಾಥ ಕಾಜಗಾರ,ಶಾಸಕರ ಮಾದರಿ ಶಾಲೆಯ ಮುಖ್ಯೋಪಾಧ್ಯಾಯರಾದ ಮಂಜುನಾಥ ಕಮ್ಮಾರ, ಶಂಕರ ಇಜಂತಕರ, ಗಿರೀಶ ಮುನವಳ್ಳಿ ನೌಕರರ ಸಂಘದ ಪದಾಧಿಕಾರಿಗಳು, ಶಿಕ್ಷಣ ಸಂಯೋಜಕರು, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರು, ಸಮೂಹ ಸಂಪನ್ಮೂಲ ಕೇಂದ್ರಗಳ ಸಂಪನ್ಮೂಲ ವ್ಯಕ್ತಿಗಳು, ವಿವಿಧ ಶಾಲೆಗಳಿಂದ ಆಗಮಿಸಿದ್ದ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರುಗಳು ಸದಸ್ಯರುಗಳು, ಅಡುಗೆಯವರು, ಹಳೆಯ ವಿದ್ಯಾರ್ಥಿಗಳು, ವಿವಿಧ ಶಾಲೆಗಳಿಂದ ಆಗಮಿಸಿದ್ದ ಮುಖ್ಯೋಪಾಧ್ಯಾಯರುಗಳು, ಸಹಶಿಕ್ಷಕ ಶಿಕ್ಷಕಿಯರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರತ್ನಾ ಸೇತಸನದಿ ಪ್ರಾರ್ಥನಾ ಗೀತೆ ಹೇಳಿದರು. ಕುಶಾಲ ಮುದ್ದಾಪುರ ಕಾರ್ಯಕ್ರಮ ನಿರೂಪಿಸಿದರು.ರವಿ ನಲವಡೆ ವಂದಿಸಿದರು.