Savadatti: ಖಾಸಗಿ ವಾಹನಗಳ ಮಾಲಿಕರು ಮತ್ತು ಚಾಲಕರು ತಮ್ಮ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು – ಪ್ರಶಾಂತ ಬಿ ಪಾಟೀಲ.

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಸವದತ್ತಿ – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಬರುವ ಏಳನೇಯ ತಾರೀಖಿನಿಂದ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಿ ಕೊಳ್ಳುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಿದ್ದು ಅದರಿಂದ ಸಾರ್ವಜನಿಕರಿಗೆ ಪ್ರಯಾಣಿಕರಿಗೆ ತೊಂದರೆಯಾಗಬಾರದು. ಆ ನಿಟ್ಟಿನಲ್ಲಿ ನಾವು ಖಾಸಗಿ ವಾಹನಗಳನ್ನು ಉಪಯೋಗಿಸಿಕೊಂಡು ಪ್ರಯಾಣಿಕರಿಗೆ ಯಾವದೇ ರೀತಿಯ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಖಾಸಗಿ ವಾಹನಗಳ ಮಾಲೀಕರು ಮತ್ತು ಚಾಲಕರು ತಮ್ಮ ತಮ್ಮ ವಾಹನಗಳನ್ನು ಮುಂಜಾಗ್ರತಾ ಕ್ರಮವಾಗಿ ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು ಎಂದು ತಹಶೀಲ್ದಾರ ಪ್ರಶಾಂತ ಬಿ ಪಾಟೀಲ ಹೇಳಿದರು

ಅವರು ಸವದತ್ತಿ ಪೊಲೀಸ ಠಾಣೆಯಲ್ಲಿ ಪೊಲೀಸ್ ಇಲಾಖೆಯವರು ಕರೆದ ಖಾಸಗಿ ವಾಹನಗಳ ಮಾಲೀಕರ ಮತ್ತು ಚಾಲಕರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. “ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ವಾಹನಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜೊತೆಗೆ ಹೆಚ್ಚಿಗೆ ಹಣ ವಸೂಲಿ ಮಾಡಬಾರದು ಒಟ್ಟಾರೆಯಾಗಿ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಮತ್ತು ಖಾಸಗಿ ವಾಹನಗಳಿಗೆ ನಿಲ್ದಾಣಗಳಲ್ಲಿ ಸೂಕ್ತ ಪೊಲೀಸ ಬಂದೋಬಸ್ತ ಮಾಡಲಾಗುವುದು” ಎಂದು ಮಾತನಾಡಿದರು
ಅದೇ ರೀತಿಯಾಗಿ ಸಿಪಿಐ ಮಂಜುನಾಥ ನಡುವಿನಮನಿ ಮಾತನಾಡಿ “ಸರಕಾರ ಎಸ್ಮಾ ಕಾಯ್ದೆ ಜಾರಿ ಮಾಡಿರುತ್ತದೆ ಯಾರೂ ಭಯ ಪಡಬೇಕಿಲ್ಲ ಯಾರಾದರೂ ಆ ಸಂದರ್ಭದಲ್ಲಿ ಪ್ರಯಾಣಿಕರಿಗೆ ಮತ್ತು ವಾಹನಗಳನ್ನು ನಿಲ್ಲಿಸುವುದು ಸರಕಾರಿ ಮತ್ತು ಖಾಸಗಿ ವಾಹನಗಳ ಮೇಲೆ ಯಾರಾದರೂ ದಾಂಧಲೆ ವಗೈರೆ ಮಾಡಿದರೆ ಅವರ ಮೇಲೆ ಕಾನೂನಿನ ಪ್ರಕಾರ ಪ್ರಕರಣ ದಾಖಲಿಸಲಾಗುವುದು” ಎಂದರು.

ನಂತರ ಚುನಾವಣಾ ನಿಮಿತ್ತ ಆಗಮಿಸಿದ ಪಿಎಸ್‍ಐ ನಿಂಗಪ್ಪ ಪೂಜೇರ ಮಾತನಾಡಿ, “ಈ ಸಂದರ್ಭದಲ್ಲಿ ಖಾಸಗಿ ವಾಹನಗಳ ಮಾಲೀಕರು ವಾಹನಗಳ ದಾಖಲೆ ಪತ್ರಗಳನ್ನು ಹಾಗೂ ವಾಹನ ಚಾಲನಾ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಇಟ್ಟುಕೊಂಡಿರಬೇಕು. ಚಾಲಕರು ಬಹಳಷ್ಟು ಕಾಳಜಿಯಿಂದ ವಾಹನ ಚಲಾಯಿಸಬೇಕು ವಾಹನಗಳ ಒಳಗೆ ಹೆಚ್ಚಿಗೆ ಸೀಟುಗಳನ್ನು ಹಾಕುವಂತಿಲ್ಲ. ಚಾಲಕರು ಕುಡಿದು ವಾಹನ ಚಲಾವಣೆ ಮಾಡಬಾರದು ಪ್ರಯಾಣಿಕರಿಂದ ಹೆಚ್ಚಿಗೆ ಹಣ ವಸೂಲಿ ಮಾಡುವುದು ಕಂಡು ಬಂದರೆ ಆ ವಾಹನ ಮಾಲೀಕನ ಮೇಲೆ ಪ್ರಕರಣ ದಾಖಲಿಸಲಾಗುವುದು. ತಾಲೂಕಿನ ಎಲ್ಲ ಖಾಸಗಿ ಬಸ್ಸುಗಳ ಮತ್ತು ಟ್ರ್ಯಾಕ್ಸ ಮಾಲಿಕರ ಚಾಲಕರ ಲಿಸ್ಟನ್ನು ಕೂಡಲೇ ಸವದತ್ತಿ ಪೊಲೀಸ ಠಾಣೆಗೆ ನೀಡಬೇಕು” ಎಂದು ವಾಹನಗಳ ಮಾಲೀಕರಿಗೆ ಹೇಳಿದರು

- Advertisement -
- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!