ಪ್ರಭಾಶುಗರ್ಸ್ ನೌಕರರ ಸಹಕಾರಿ ಪತ್ತಿನ ಸಂಘದ ನೂತನ ಅಧ್ಯಕ್ಷರಾಗಿ ಪಿ.ಶಿವಪ್ಪ ಆಯ್ಕೆ

Must Read

ಘಟಪ್ರಭಾ: ಪ್ರಭಾಶುಗರ ನೌಕರರ ಸಹಕಾರಿ ಪತ್ತಿನ ಸಂಘದ ನೂತನ ಅಧ್ಯಕ್ಷರಾಗಿ ಪಿ. ಶಿವಪ್ಪ ಹಾಗೂ ಉಪಾಧ್ಯಕ್ಷರಾಗಿ ಬಿ.ಎಲ್. ಭಜಂತ್ರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರಿ ಸಂಘಗಳ ಹಿರಿಯ ನಿರೀಕ್ಷಕ ಎಸ್.ಎಸ್. ಬಿರಾದಾರ ಪಾಟೀಲ ಪ್ರಕಟಿಸಿದರು.

ಸಂಘದ ಕಾರ್ಯಾಲಯದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಸನ್ 2022 ರಿಂದ 2025 ರವರೆಗೆ ಮೂರು ವರ್ಷಗಳ ಅವಧಿಗೆ ಈ ಚುನಾವಣೆ ನಡೆದಿದೆ.

ನಂತರ ನಡೆದ ಅಭಿನಂದನಾ ಸಮಾರಂಭದಲ್ಲಿ ಸಂಘದ ನೂತನ ಅಧ್ಯಕ್ಷ ಪಿ. ಶಿವಪ್ಪ ಮಾತನಾಡಿ, ನೌಕರರ ಸಹಕಾರಿ ಪತ್ತಿನ ಸರ್ವಾಂಗೀಣ ಅಭಿವೃದ್ಧಿಗೆ ಹಿರಿಯರ ಮಾರ್ಗದರ್ಶನದಲ್ಲಿ ಸಂಘದ ಎಲ್ಲ ನಿರ್ದೇಶಕರುಗಳು ಸಹಕಾರದೊಂದಿಗೆ ಶ್ರಮಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಬಿ.ಆರ್. ಪಾಟೀಲ, ಎಸ್.ಐ. ಸಿದ್ನಾಳ, ಡಿ.ವ್ಹಿ. ಸಿಂಧೆ, ಎ.ಬಿ. ದುಂಡ್ಯಾಗೋಳ, ಜಿ.ಎಚ್. ರಫಾಯಿ, ಜಿ.ಎಸ್. ಪೂಜೇರಿ ಹಾಗೂ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಎಸ್.ಕೆ. ವಾಲಿಕಾರ, ಆಯ್.ಎಂ. ಚೌಧರಿ, ಪಿ.ಎಲ್. ಬಿದರಿ, ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ಮಾಸ್ತಿಹೊಳಿ ಮುಂತಾದವರು ಉಪಸ್ಥಿತರಿದ್ದರು.

ಪ್ರಭಾಶುಗರ ನೌಕರರ ಸಹಕಾರಿ ಪತ್ತಿನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಪಿ.ಶಿವಪ್ಪ ಅವರನ್ನು ಲೆಕ್ಕ ಪರಿಶೋಧಕ ಸೈದಪ್ಪ ಗದಾಡಿ, ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ, ಶಾಸಕರ ಆಪ್ತ ಸಹಾಯಕರಾದ ನಾಗಪ್ಪ ಶೇಖರಗೋಳ, ನಿಂಗಪ್ಪ ಕುರಬೇಟ ಹಾಗೂ ಮತ್ತಿತರರು ಅಭಿನಂದಿಸಿದ್ದಾರೆ.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group