ಬೀದರ – ಕಾಂಗ್ರೆಸ್ ಆರಂಭಿಸಿರುವ ಪೇ ಸಿಎಂ ಆಂದೋಲನವು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೇ ತಿರುಗುಬಾಣವಾಗಲಿದೆ. ಇದು ಎಲ್ಲರಿಗೂ ಗೊತ್ತಾಗುತ್ತದೆ ನೋಡುತ್ತಿರಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.
ನಗರದಲ್ಲಿ ಮಾಧ್ಯಮದವರೊಡನೆ ಮಾತನಾಡಿದ ಅವರು, ಈ ದೇಶದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ. ಇಂದು ರಾಹುಲ್ ಗಾಂಧಿ ಮೂಲಕ ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಈ ದೇಶದಲ್ಲಿ 60 ವರ್ಷಗಳ ಕಾಲ ಆಡಳಿತ ಮಾಡಿದ ಕಾಂಗ್ರೆಸ್ ಗೆ ತನ್ನ ಅಧ್ಯಕ್ಷರನ್ನು ಆಯ್ಕೆ ಮಾಡಲು ಆಗುತ್ತಿಲ್ಲ ಎಂದರು.
ಭಾರತ ಜೋಡೋ ಕಾಂಗ್ರೆಸ್ ಪಾದಯಾತ್ರೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿವೈ ವಿ, ಅವರಿಂದ ಭಾರತೀಯ ಜನತಾ ಪಾರ್ಟಿ ಹೆದರಿಕೊಳ್ಳುವ ಪ್ರಶ್ನೆ ಇಲ್ಲ. ಅವರು ಏನೇ ಮಾಡಿದರೂ ಜನರು ಕಾಂಗ್ರೆಸ್ ಪಕ್ಷವನ್ನು ಮರೆತ್ತಿದ್ದಾರೆ.ಮುಂಬರುವ ದಿನಗಳಲ್ಲಿ ರಾಜ್ಯ ಸೇರಿದಂತೆ ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ.ಆದರೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದರು.
ವರದಿ: ನಂದಕುಮಾರ ಕರಂಜೆ, ಬೀದರ