- Advertisement -
ಮೈಸೂರು-ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವತಿಯಿಂದ ಜ.೧೮ ಹಾಗೂ ೧೯ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಸುವರ್ಣ ಸಂಭ್ರಮ ೨೦೨೫ ಮಹಾಸಮ್ಮೇಳನಕ್ಕೆ ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಡಿ.ಟಿ.ಪ್ರಕಾಶ್‌ರವರ ನೇತೃತ್ವದಲ್ಲಿ ಮೊಹಲ್ಲಾ ನಿವಾಸಿಗಳಿಗೆ ಹಾಗೂ ಭಕ್ತಾದಿಗಳಿಗೆ ಸಮಾವೇಶದ ಕರಪತ್ರಗಳನ್ನು ನೀಡಿ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ದೇವಸ್ಥಾನದ ಮುಖ್ಯಸ್ಥ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ಸಮಾವೇಶಕ್ಕೆ ಎರಡೂ ದಿನಗಳು ದೇವಸ್ಥಾನದ ವತಿಯಿಂದ ಎರಡು ಬಸ್ಸುಗಳಲ್ಲಿ ಭಕ್ತಾದಿಗಳಿಗೆ ವ್ಯವಸ್ಥೆ ಮಾಡಲಾಗಿದ್ದು, ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಬೇಕೆಂದು ಅವರು ತಿಳಿಸಿದರು.