ಸರ್ಕಾರಕ್ಕೆ ಪಂಚಮಸಾಲಿಗಳ ಎಚ್ಚರಿಕೆ ; ಬೇಡಿಕೆ ಈಡೇರದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

Must Read

ಮೂಡಲಗಿ: ನ.13ರಂದು ಗೋಕಾಕ ನಗರದಲ್ಲಿ ತಾಲೂಕಾ ಮಟ್ಟದ ಪಂಚಮಸಾಲಿಗಳ ಬೃಹತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಆ ಸಮಾವೇಶ ಮುಗಿಯುವುದರೊಳಗಾಗಿ ಸರ್ಕಾರ 2ಎ ಮೀಸಲಾತಿಯನ್ನು ಘೋಷಣೆ ಮಾಡಬೇಕು ಎಂದು ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಸೋಮವಾರದಂದು ತಾಲೂಕಿನ ಕಲ್ಲೋಳಿ ಪಟ್ಟಣದ ಸಭಾ ಭವನದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಲ್ಲೋಳಿ ಹಾಗೂ ಹುಕ್ಕೇರಿ ಪಟ್ಟಣದಲ್ಲಿ ಬೃಹತ ಸಮಾವೇಶದ ಮೂಲಕ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಲಾಗಿದ್ದು, ಗೋಕಾಕ ಸಮಾವೇಶದ ಒಳಗಾಗಿ ಸರ್ವ ಪಕ್ಷಗಳ ಸಭೆ ಕರೆದು ಆಯೋಗದ ವರದಿಯಲ್ಲಿ ಪಡೆದುಕೊಳ್ಳದೆ ಹೋದರೇ ಹುಕ್ಕೇರಿಯ ಸಮಾವೇಶದಲ್ಲಿ ಮಾಡಿದ ನಿರ್ಧಾರದ ಹಾಗೆ ಡಿ.12ರಂದು ವಿಧಾನಸೌಧವನ್ನು 25ಲಕ್ಷ ಪಂಚಮಸಾಲಿಗಳಿಂದ ಮುತ್ತಿಗೆ ಹಾಕಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದರು.

ಸರ್ಕಾರ ಗೋಕಾಕ ಸಮಾವೇಶದೊಳಗಾಗಿ ಒಂದು ನಿರ್ಧಾರಕ್ಕೆ ಬರಬೇಕು ಇಲ್ಲವಾದರೇ ಬೆಂಗಳೂರಿನಲ್ಲಿ ವಿಧಾನಸೌಧ ಮುಂದೆ ವಿರಾಟ ಪಂಚಮಸಾಲಿ ಸಮಾವೇಶವನ್ನು ಮಾಡಲಾಗುವುದು ಆದರಿಂದ ಜಿಲ್ಲೆಯ ಎಲ್ಲ ಪಂಚಮಸಾಲಿಗಳು ಸಮಾವೇಶದಲ್ಲಿ ಭಾಗವಹಿಸಬೇಕೆಂದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯಧ್ಯಕ್ಷ ನಿಂಗಪ್ಪ ಪಿರೋಜಿ, ರಾಜ್ಯ ಸಾಮಾಜಿಕ ಜಾಲತಾಣ ಅಧ್ಯಕ್ಷ ದೀಪಕ್ ಜುಂಜರವಾಡ, ಮೂಡಲಗಿ ತಾಲೂಕಾ ಯುವ ಘಟಕ ಅಧ್ಯಕ್ಷ ಸಂಗಮೇಶ ಕೌಜಲಗಿ ಮೀಸಲಾತಿ ಹೋರಾಟ ಸಮಿತಿ ತಾಲೂಕಾ ಅಧ್ಯಕ್ಷ ಮಲ್ಲು ಗೋಡಿಗೌಡರ, ರಾಜ್ಯ ಪಂಚಸಮಾಲಿ ರಕ್ಷಕದಳ ಅಧ್ಯಕ್ಷ ಬಾಳೇಶ ಶಿವಾಪೂರ, ಮೂಡಲಗಿ ತಾಲೂಕಾಧ್ಯಕ್ಷ ಬಸವರಾಜ ಪಾಟೀಲ, ಬಸವಶ್ರೀ ಯುವಕ ಸಂಘದ ಅಧ್ಯಕ್ಷ ಕಲ್ಮೇಶ ಗೋಕಾಕ ಇದ್ದರು.

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group