ಪಂಚಮಸಾಲಿ ಸಮಾಜ ಕಟ್ಟುವ ಕೆಲಸ ಮಾಡುತ್ತಿರುವೆ, ಒಡೆಯುವ ಕೆಲಸ ಅಲ್ಲ – ಜಗದ್ಗುರು ಜಯ ಮೃತ್ಯುಂಜಯ ಸ್ವಾಮೀಜಿ

Must Read

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...

ಸ್ನೇಹಿತರ ದಿನಾಚರಣೆಯ ಶುಭಾಷಯಗಳು

ನಮ್ಮಲ್ಲಿ ಎಷ್ಟೋ ದಿನಾಚರಣೆಗಳಿವೆ. ಇದರಲ್ಲಿ ಸ್ನೇಹಕ್ಕೆ ಕೊಡುವ ಬೆಲೆ ಯಾವುದಕ್ಕೂ ಕೊಡಲಾಗದು ಎನ್ನುತ್ತಾರೆ. ಕಾರಣ ಇಲ್ಲಿ ಸ್ವಾರ್ಥ ಅಹಂಕಾರವಿರದೆ ಶುದ್ದ ಭಾವನೆಗಳ ಸಮ್ಮಿಲನವಿರುತ್ತದೆ. ಬಡವ ಬಡವನನ್ನು...

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ

ಸಿಂದಗಿ: ರಾಜ್ಯದಲ್ಲಿ ಪಿಂಜಾರ, ನದಾಫ್ ಸಮುದಾಯಗಳು ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು ಈ ಜನಾಂಗ ಉದ್ದಾರವಾಗಬೇಕಾದರೆ ಪಿಂಜಾರ್ ಅಭಿವೃದ್ಧಿ ನಿಗಮ ಅವಶ್ಯಕತೆ ಇದೆ. ಪ್ರವರ್ಗ...

ಮೂಡಲಗಿ: ‘ಲಿಂಗಾಯತ ಪಂಚಮಸಾಲಿ ಸಂಘಟನೆಗೆ ಟೀಕೆ, ಅಡ್ಡಿಗಳು ಬಂದರೂ ಅವುಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಿಸುವುದು ನಮ್ಮ ಗುರಿಯಾಗಿದೆ’ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಗುರುಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಹೇಳಿದರು.

ಸ್ಥಳೀಯ ಎಲ್ಎಸ್ಎಂಪಿ ಸೊಸಾಯಿಟಿ ಕಾಂಪ್ಲೆಕ್ಸ್ ನಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ಕಚೇರಿಯನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಡನೆ ಅವರು ಮಾತನಾಡಿದರು.

ಜಮಖಂಡಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ಮೂರನೇ ಪರ್ಯಾಯ ಪೀಠ ರಚನೆಯ ಪ್ರಕ್ರಿಯೆ ನಡೆದಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪರ್ಯಾಯ ಪೀಠ, ಸಂಘಟನೆಯ ಬಗ್ಗೆ ಟೀಕಿಸುವುದು, ಪ್ರತಿಕ್ರಿಯೆ ನೀಡುವುದು ಅವಶ್ಯವಿಲ್ಲ ಎಂದರು.

- Advertisement -

ಪಂಚಮಸಾಲಿ ಸಂಘಟನೆಯ ಪರ್ಯಾಯ ಸಂಘಟನೆಯನ್ನು ತಿರಸ್ಕರಿಸುವುದಾಗಲಿ, ಪುರಸ್ಕರಿಸುವುದಾಗಲಿ ನಾನು ಮಾಡುವುದಿಲ್ಲ. ಒಳ್ಳೆಯ ಕೆಲಸ ಮಾಡುವಲ್ಲಿ ಅಪಸ್ವರ, ಒಡೆಯುವ ತಂತ್ರಗಳು ಸಾಮಾನ್ಯವಾದದ್ದು. ನಮ್ಮ ಸಂಘಟನೆಯು ಸಮಾಜ ಕಟ್ಟುವ ಕೆಲಸವಾಗಿದೆ ಒಡೆಯುವ ಕೆಲಸ ಅಲ್ಲ ಎಂದರು.

ಲಿಂಗಾಯತ ಪಂಚಮಸಾಲಿ ಪೀಠದ ಮೂಲಕ 2ಎ ಮೀಸಲಾತಿ ಪಡೆಯುವ ಸಲುವಾಗಿ ಲಕ್ಷಾಂತರ ಪಂಚಮಸಾಲಿ ಜನರೊಂದಿಗೆ 39 ದಿನಗಳ ಬೆಂಗಳೂರು ವರೆಗೆ ಪಾದಯಾತ್ರೆ ಜೊತೆಗೆ ಹೋರಾಟ ಮಾಡಲಾಗಿದೆ. ಮೀಸಲಾತಿ ನೀಡುವ ಸಲುವಾಗಿ ಸರ್ಕಾರಕ್ಕೆ 6 ತಿಂಗಳ ಗಡುವು ನೀಡಿದ್ದು ಸರ್ಕಾರವು ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಪ್ರಕಟಿಸುವ ಭರವಸೆ ನಮಗಿದೆ ಎಂದರು.

ಪಾದಯಾತ್ರೆಯ ಮೂಲಕ ಹೋರಾಟವು ಹಳ್ಳಿಯಿಂದ ಹಿಡಿದು ರಾಷ್ಟ್ರಮಟ್ಟದ ವರೆಗೆ ಪಂಚಮಸಾಲಿ ಸಮಾಜದ ಬಗ್ಗೆ ಜಾಗೃತಿ ಮೂಡಿದೆ. ನಮ್ಮ ಹೋರಾಟವು ಮಠಮಾನ್ಯ ಕಟ್ಟುವುದಕ್ಕಾಗಿ ಅಲ್ಲ ಸಮಾಜ ಕಟ್ಟುವುದಕ್ಕಾಗಿ ಇದೆ. ನಿಸ್ವಾರ್ಥದ ಹೋರಾಟಕ್ಕೆ ಯಾವತ್ತು ಜಯ ದೊರೆಯುತ್ತದೆ ಎನ್ನುವುದೇ ಈ ನೆಲದ ವೈಶಿಷ್ಟ್ಯವಾಗಿದೆ ಎಂದರು.

ಪರ್ಯಾಯ ಸಂಘಟನೆಗೆ ಪಂಚಮಸಾಲಿ ಸಮಾಜದ ಜನರು ಗೊಂದಲಕ್ಕೆ ಒಳಗಾಗಿಲ್ಲ. ಸಮಾಜದ ಸಲುವಾಗಿ ಯಾರು ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದಾರೆ ಅವರೊಂದಿಗೆ ಸಮಾಜದ ಜನರು ಇದ್ದೇ ಇರುತ್ತಾರೆ. ಹೀಗಾಗಿ ಮೀಸಲಾತಿಗಾಗಿ ನನ್ನ ಹೋರಾಟವು ಅಚಲವಾಗಿದೆ. 2021ರಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಖಂಡಿತಾಗಿ ದೊರೆಯಲಿದೆ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದರು.

- Advertisement -
- Advertisement -

Latest News

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...
- Advertisement -

More Articles Like This

- Advertisement -
close
error: Content is protected !!