ಸಿಂದಗಿ: ರಾಜ್ಯದ ಪಂಚಮಸಾಲಿ ಸಮಾಜದ ಬಾಂಧವ್ಯವನ್ನು ಉಳಿಸಿಕೊಳ್ಳಲು ಈ ಸಮಾಜಕ್ಕೆ 2ಎ ಮಿಸಲಾತಿ ನೀಡುವುದು ಸರಕಾರಕ್ಕೆ ಅನಿವಾರ್ಯತೆಯಿದೆ ಕೊನೆಯ ಹಂತದಲ್ಲಿ ಮೀಸಲಾತಿ ಘೋಷಣೆ ಮಾಡುವ ನಿರೀಕ್ಷೆಯಿದೆ ಎಂದು ದ್ರಾಕ್ಷಿ ಬೆಳೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್.ರುದ್ರಗೌಡರ ವಿವರಿಸಿದರು.
ತಾಲೂಕು ಪಂಚಮಸಾಲಿ ಸಮಾಜ ಹಮ್ಮಿಕೊಂಡ ಸನ್ಮಾನ ಸ್ವೀಕರಿಸಿ ಮಾತನಾಡಿ, ಪಂಚಮಸಾಲಿ ಸಮಾಜದ ಕುಲಗುರುಗಳು ಕೂಡಲ ಸಂಗಮದಿಂದ ಪಾದಯಾತ್ರೆ ನಡೆಸಿ ಮತ್ತೆ ಬೆಂಗಳೂರಿನಲ್ಲಿ ಸುಮಾರು ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸಿದ್ದು ಸರಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಅಲ್ಲದೆ ಮೀಸಲಾತಿ ಕಡೆಗಣಿಸಿದರೆ ಉತ್ತರ ಕರ್ನಾಟಕದಲ್ಲಿ ಸುಮಾರು 8 ರಿಂದ 9 ಸ್ಥಾನಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎನ್ನುವ ಪರಿಕಲ್ಪನೆಯು ಕೂಡಾ ಸರಕಾರಕ್ಕಿದೆ ಆ ಕಾರಣಕ್ಕೆ ಇನ್ನು ಕೆಲವೇ ದಿನಗಳಲ್ಲಿ ಮಿಸಲಾತಿ ಘೋಷಣೆ ಮಾಡುವ ಸಾಧ್ಯತೆಗಳು ಹೆಚ್ಚಿವೆ ಇದರ ಬಗ್ಗೆ ಬಸವನಗೌಡ ಪಾಟೀಲ ಅವರು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಎಂ.ಎಂ.ಹಂಗರಗಿ, ಮೀಸಲಾತಿ ಹೋರಾಟ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ ನಾಗರಬೆಟ್ಟ, ಮಲ್ಲನಗೌಡ ಪಾಟೀಲ, ಸಂಗನಗೌಡ ಪಾಟೀಲ ಉಪಸ್ಥಿತರಿದ್ದರು.