spot_img
spot_img

ಪಂಚಮಸಾಲಿ ಮೀಸಲಾತಿ ಹಕ್ಕೊತ್ತಾಯ ಸಭೆ

Must Read

- Advertisement -

ಸಿಂದಗಿ: ತಾಲೂಕು ಲಿಂಗಾಯತ ಪಂಚಮಸಾಲಿ ಸಮಾಜದಿಂದ ನ.14 ರಂದು ಬೆಳಿಗ್ಗೆ 10 ಗಂಟೆಗೆ ಎ.ಪಿ.ಎಂ.ಸಿ ಎದುರುಗಡೆ ಇರುವ ಅನಂತಲಕ್ಷ್ಮೀ ಕನ್ವೆನ್ಷನ್ ಹಾಲ್‍ನಲ್ಲಿ  ಹಮ್ಮಿಕೊಂಡಿರುವ 2022ನೆಯ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ 2ಎ ಮೀಸಲಾತಿ ಹಕ್ಕೊತ್ತಾಯ ಸಮಾವೇಶ  ಜರುಗಲಿದೆ ಎಂದು  ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ ಹಂಗರಗಿ ತಿಳಿಸಿದ್ದಾರೆ.

ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಶೇಕಡಾ 90% ರಷ್ಟು ಅಂಕಗಳನ್ನು ಪಡೆದ ಸಿಂದಗಿ ತಾಲ್ಲೂಕಿನ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುತ್ತಿದ್ದು, ಪ್ರತಿಭಾವಂತ ಮಕ್ಕಳು ತಮ್ಮ ಅಂಕಪಟ್ಟಿ ಹಾಗೂ ಭಾವಚಿತ್ರವನ್ನು ಕೂಡಲೇ ಸಮಾಜದ ಪದಾಧಿಕಾರಿಗಳಿಗೆ ಸಲ್ಲಿಸಬೇಕು. ಸಮಾಜದ ನಿವೃತ್ತ ನೌಕರರನ್ನು ಕೂಡಾ ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುತ್ತದೆ.

ಕಾರ್ಯಕ್ರಮದಲ್ಲಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ, ಆಸಂಗಿಹಾಳದ ಆರೂಢ ಮಠದ ಶಂಕರಾನಂದ ಮಹಾರಾಜರ ಸಾನ್ನಿಧ್ಯದಲ್ಲಿ, ವಿಜಯಪುರ ನಗರದ ಶಾಸಕ ಮಾಜಿ ಸಚಿವ ಬಸನಗೌಡ ಪಾಟೀಲ(ಯತ್ನಾಳ) ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಜ್ಯೋತಿ ಬೆಳಗಿಸುವರು. ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಮನಗೂಳಿ ಪದವಿ ಮಹಾವಿದ್ಯಾಲಯ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಉಪನ್ಯಾಸ ನೀಡಲಿದ್ದಾರೆ.

- Advertisement -

ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ಸಿಂದಗಿ ಆರಕ್ಷಕ ಠಾಣಾಧಿಕಾರಿ ಸೋಮೇಶ ಗೆಜ್ಜಿ, ದಯಾನಂದ ಬಿರಾದಾರ, ಸೋಮನಗೌಡ ಬಿರಾದಾರ ಸೇರಿದಂತೆ ಸಮಾಜದ ಅನೇಕ ಗಣ್ಯರು, ಮುಖಂಡರು ಈ ಸಮಾರಂಭದಲ್ಲಿ ಭಾಗಿಯಾಗುತ್ತಿದ್ದಾರೆ. ಕಾರಣ ಸಮಾಜದ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಪ್ರಧಾನ ಕಾರ್ಯದರ್ಶಿ ಆನಂದ ಶಾಬಾದಿ ಹಾಗೂ ಸಮಾಜದ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧಾರವಾಡ ಪ್ರಾದೇಶಿಕ ವಿಭಾಗಕ್ಕೆ ನಿರ್ದೇಶಕರಾಗಿ ಶ್ರೀಮತಿ ದಯಾಶೀಲ 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧಾರವಾಡ ಪ್ರಾದೇಶಿಕ ವಿಭಾಗಕ್ಕೆ ಬೆಳ್ತಂಗಡಿ ಮೂಲದ ಶ್ರೀಮತಿ ದಯಾಶೀಲರವರು ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗಡೆಯವರ ಆಶೀರ್ವಾದದೊಂದಿಗೆ ಯೋಜನೆಯ ಮುಖ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group