ಗೋಕಾಕ – ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿರುವ ಬಜೆಟ್ ಬಡವರು, ಮಧ್ಯಮ ವರ್ಗಕ್ಕೆ ಅನುಕೂಲವಾಗಿದೆ. ರೈತರಿಗೂ ಕೂಡ ಭಾರಿ ಪ್ರಯೋಜನವಾಗಿದೆ. ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ಅಭಿವೃದ್ದಿಗೆ ಪೂರಕವಾಗಿದೆ. ಮಹಿಳೆಯರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಪ್ರಕಟಿಸಿರುವುದು ಸಂತೋಷದಾಯವಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಕೇಂದ್ರ ಬಜೆಟ್ ಮಂಡನೆಯ ಹಿನ್ನೆಲೆಯಲ್ಲಿ ಬಜೆಟ್ ಬಗ್ಗೆ ತಮ್ಮ ಪ್ರಶಂಸೆ ವ್ಯಕ್ತಪಡಿಸಿದ ಅವರು, ಯುವ ಜನಾಂಗಕ್ಕೆ ಉದ್ಯೋಗಾವಕಾಶಗಳನ್ನು ಸೃಷ್ಟಿ ಮಾಡಿದೆ. ವಿಕಸಿತ ಭಾರತ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ಆತ್ಮ ವಿಶ್ವಾಸ ಶಕ್ತಿಯನ್ನು ಈ ಬಜೆಟ್ ತುಂಬಿದೆ.
ಒಟ್ಟಿನಲ್ಲಿ ಈ ಬಜೆಟ್ ಎಲ್ಲ ವರ್ಗಗಳಿಗೆ ಸಹಕಾರಿಯಾಗಿದೆ.
ಜನಪರ, ರೈತಪರ, ಮಹಿಳಾಪರ, ಯುವ ಜನತೆಯ ಆಶಾಕಿರಣವಾಗಿ ಮಂಡಿಸಿರುವುದು ಭಾರತ ಇನ್ನಷ್ಟೂ ಶಕ್ತಿಶಾಲಿ ರಾಷ್ಟ್ರವಾಗಲು ಪೂರಕವಾಗಿದೆ. ಅದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.