spot_img
spot_img

ವಿಕಲಚೇತನರು ಸರಕಾರಿ ಯೋಜನೆಗಳ ಸದುಪಯೋಗಪಡಿಸಿಕೊಳ್ಳಿ – ಈರಣ್ಣ ಕಡಾಡಿ

Must Read

ಮೂಡಲಗಿ: ಭಗವಂತನ ಸೃಷ್ಟಿಯಲ್ಲಿ ವಿಕಲಚೇತನರಿಗೂ ಒಂದು ವಿಶಿಷ್ಟ ಶಕ್ತಿ ಇದ್ದೂ ಅವರು ಕೂಡಾ ಸ್ವಾವಲಂಬಿ ಜೀವನ ನಡೆಸುವಂತಾಗಲು ಸರ್ಕಾರ ಹಲವಾರು ಯೊಜನೆಗಳನ್ನು ಜಾರಿಗೆ ತಂದಿದೆ. ಯಾರು ವಿಕಲಚೇತನರಲ್ಲವೋ ಅಂಥವರು ವಿಕಲಚೇತನರಿಗೆ ಆ ಯೋಜನೆಗಳ ಸದುಪಯೋಗವಾಗುವಂತೆ ಸಹಾಯ ಮಾಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಶುಕ್ರವಾರ ಸೆ-14 ರಂದು ಕಲ್ಲೋಳಿ ಪಟ್ಟಣದ ಸಂಸದರ ಜನಸಂಪರ್ಕ ಕಾರ್ಯಾಲಯದ ಆವರಣದಲ್ಲಿ  ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನನ್ನ ಶಿಫಾರಸ್ಸಿನ ಮೇರೆಗೆ ತುಕ್ಕಾನಟ್ಟಿ ಗ್ರಾಮದ ವಿಕಲಚೇತನ ಫಲಾನುಭವಿ ವೀರಭದ್ರ ಕೋರೆ ಅವರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ಹಸ್ತಾಂತರ ಮಾಡಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು,  ವಿಕಲಚೇತನರು ಮುಖ್ಯವಾಹಿನಿಗೆ ಬರಲು ಸರ್ಕಾರ ವಿವಿಧ ಯೋಜನೆ ರೂಪಿಸಿ ಪ್ರತ್ಯೇಕ ಅನುದಾನ ಮೀಸಲಿಡುತ್ತಿದೆ. ವಿಕಲಚೇತನರು ನ್ಯೂನತೆಯ ಬಗ್ಗೆ ಮಾನಸಿಕವಾಗಿ ಕುಗ್ಗದೇ ಆತ್ಮಸ್ಥೈರ್ಯ ಬೆಳೆಸಿಕೊಂಡು ಎಲ್ಲ ಸವಾಲುಗಳನ್ನು ಗೆದ್ದು ನಿಲ್ಲುವಂತೆ ಬದುಕಬೇಕಾಗಿ ಕರೆ ನೀಡಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆಯ ಅಧ್ಯಕ್ಷ ಬಸವರಾಜ ಕಡಾಡಿ, ಸುಭಾಸ ವಂಟಗೂಡಿ, ತಮ್ಮಣ್ಣ ದೇವರ, ಅಜೀತ ಚಿಕ್ಕೋಡಿ, ಅಶೋಕ ಆಡಿನವರ, ಕುಶಾಲ ಗುಡೇನವರ, ಹಣಮಂತ ಕಲಕುಟ್ರಿ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!