spot_img
spot_img

ಬಾಲ್ಯ ವಿವಾಹ ತಡೆಗಟ್ಟಲು ಜನರ ಸಹಕಾರ ಅಗತ್ಯ – ಭೀಮಶಿ ಹೆಬ್ಬಾಳ

Must Read

- Advertisement -

ಮೂಡಲಗಿ: ಬಾಲ್ಯ ವಿವಾಹ ತಡೆಗಟ್ಟಲು ಸರಕಾರ ಅನೇಕ ಕಾಯ್ದೆ ಕಾನೂನುಗಳನ್ನು ಜಾರಿಗೆ ತಂದರೂ ಬಾಲ್ಯವಿವಾಹ ನಿರಂತರವಾಗಿ ನಡೆಯುತ್ತಲಿದೆ. ಅದನ್ನು ಸಂಪೂರ್ಣ ತಡೆಗಟ್ಟಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ಸರ್ಕಾರಿ ಸಹಾಯಕ ಅಭಿಯೋಜಕ ಭೀಮಶಿ ಹೆಬ್ಬಾಳ ಹೇಳಿದರು.

ಅವರು ಸಮೀಪದ ಕಮಲದಿನ್ನಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಡಲಗಿಯ  ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇವಾ ಸಂಘದ ವತಿಯಿಂದ ಹಮ್ಮಿಕೊಂಡ ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಪಾಲಕರು ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಅರಿವು ಇಲ್ಲದೇ ಇರುವುದರಿಂದ ಬಾಲ್ಯ ವಿವಾಹ ಮಾಡಲು ಮುಂದಾಗುತ್ತಾರೆ. ಪಾಲಕರು ತಮ್ಮ ಜವಾಬ್ದಾರಿಯನ್ನು ಕಳೆದುಕೊಳ್ಳಲು ಹೀಗೆ ಮಾಡುತ್ತಾರೆ. ರಕ್ತ ಸಂಬಂಧ ಉಳಿಸಿಕೊಳ್ಳಲು ಹಾಗೂ ಬಡತನ, ಅನಕ್ಷರತೆ, ಮೂಢನಂಬಿಕೆ ಬಾಲ್ಯ ಮುಖ್ಯ ಕಾರಣವಾಗಿದ್ದು, ಪಾಲಕರಿಗೆ ಬಾಲ್ಯವಿವಾಹದ ಕುರಿತ ಜಾಗೃತಿ ಮೂಡಿಸಿದಾಗ ಬಾಲ್ಯ ವಿವಾಹ ತಡೆಗಟ್ಟಬಹುದು ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇವಾ ಸಂಘದ ಅಧ್ಯಕ್ಷೆ ಎ.ಎಚ್.ಗೊಡ್ಯಾಗೋಳ ಮಾತನಾಡಿ, ಬಾಲ್ಯ ವಿವಾಹ ಮಾಡುವುದರಿಂದ ಮಕ್ಕಳು ಮಾನಸಿಕ ದೌರ್ಬಲ್ಯಕ್ಕೆ ಒಳಗಾಗುತ್ತಾರೆ. ಭಯದ ವಾತಾವರಣದಲ್ಲಿ ಬದುಕಬೇಕಾಗುತ್ತದೆ. ಮಾನಸಿಕ ಚಿತ್ರ ಹಿಂಸೆಗಳು ಅನುಭವಿಸುತ್ತಾರೆ. ಆದ್ದರಿಂದ ಮಕ್ಕಳಿಗೆ ವಯಸ್ಸಿಗೆ ಅನುಗುಣವಾಗಿ ಮದುವೆ ಮಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

- Advertisement -

ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ವಿಜಯಲಕ್ಷ್ಮಿ ರೇಳೆಕರ, ಪ್ರಿಯಾಂಕಾ ಗಜಕೋಶ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group