spot_img
spot_img

ಪರೀಕ್ಷೆಯಲ್ಲಿ ಬಿಎಸ್ ಡಬ್ಲ್ಯೂ ವಿದ್ಯಾರ್ಥಿಗಳ ಸಾಧನೆ

Must Read

ಸಿಂದಗಿ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಅಡಿಯಲ್ಲಿ ನಡೆಯುವ ಬಿ.ಎಸ್.ಡಬ್ಲ್ಯೂ ಕೋರ್ಸಿನ 2020-21 ನೆಯ ಸಾಲಿನ ಪರೀಕ್ಷೆಯಲ್ಲಿ ಸಿಂದಗಿ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಬಿ.ಎಸ್.ಡಬ್ಲ್ಯೂ, ಬಿ.ಕಾಂ ಮತ್ತು ಬಿ.ಎ ಮಹಿಳಾ ಮಹಾವಿದ್ಯಾಲಯವು, ವಿಶ್ವವಿದ್ಯಾಲಯ ಕೊಡ ಮಾಡುವ ಹತ್ತು ರ್ಯಾಂಕಗಳಲ್ಲಿ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಯರು ಐದು ರ್ಯಾಂಕಗಳನ್ನು ಪಡೆದುಕೊಂಡು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಕು. ಸುಧಾ ಹರವಾಳ (ಮೊದಲ ರ್ಯಾಂಕ್), ಕು.ಕರೀಶ್ಮಾ ಗೋಟ್ಯಾಳ (ಮೂರನೆಯ ರ್ಯಾಂಕ್), ಕು. ಕವಿತಾ ರಾಠೋಡ (ಐದನೆಯ ರ್ಯಾಂಕ್), ನಿಂಗಮ್ಮ ವಾಂಗೆ (ಏಳನೆಯ ರ್ಯಾಂಕ್) ಹಾಗೂ ಶೃತಿ ಪೂಜಾರಿ (ಎಂಟನೆಯ ರ್ಯಾಂಕ ಪಡೆದುಕೊಂಡಿರುತ್ತಾರೆ.

ವಿದ್ಯಾರ್ಥಿನಿಯರ ಕಠಿಣ ಪರಿಶ್ರಮ, ಕಾಲೇಜಿನ ಉಪನ್ಯಾಸಕರ ಅತ್ಯುತ್ತಮ ಭೋಧನೆಯಿಂದ ಇಷ್ಟೊಂದು ರ್ಯಾಂಕ್‍ಗಳನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ ಎಂದು ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆಡಳಿತ ಮಂಡಳಿಯ ಚೇರಮನ್ನರಾದ ಪೂಜ್ಯ ಶ್ರೀ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಪ್ರತಿಕ್ರಿಯಿಸಿ, ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದ್ದಾರೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರು, ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿನಿಯರಿಗೆ ಶುಭ ಕೋರಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಶ್ರೀ ಕೃಷ್ಣ ಜನ್ಮಾಷ್ಟಮಿ

ಸರ್ವಾಸಾಂ ಜಯಂತೀನಾಂ ಶ್ರೇಷ್ಠಾ ಕೃಷ್ಣಾಷ್ಟಮೀ ಮತಾ ಯಸ್ಮಾತ್ ಸನ್ನಿಹಿತಾತ್ಯಂತಂ ತತ್ರೈವೋಪವಸೇನ್ನರಃ ಸರ್ವಾಸ್ವಪಿ ಜಯಂತೀಷು ಪೂಜಾ ಕಾರ್ಯಾ ವಿಸೇಷತಃ ಸಾನಿಧ್ಯ ಏವ ಕರ್ತವ್ಯ ಉಪವಾಸೋ ನ ದೂರಗಃ ಎಲ್ಲ ಜಯಂತಿಗಳಲ್ಲಿಯೂ ಶ್ರೀ ಕೃಷ್ಣ...
- Advertisement -

More Articles Like This

- Advertisement -
close
error: Content is protected !!