- Advertisement -
ಸಿಂದಗಿ-ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಪದವಿ ಪೂರ್ವ ಕಾಲೇಜ್‍ಗಳ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ.
ಇತ್ತೀಚೆಗೆ ಪಟ್ಟಣದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜ್‍ಗಳ ಕ್ರೀಡಾಕೂಟದಲ್ಲಿ ಎಚ್.ಜಿ.ಕಾಲೇಜಿನ ವಿದ್ಯಾರ್ಥಿಗಳು ವ್ಹಾಲಿಬಾಲ್ ಕ್ರೀಡಾಕೂಟದಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನ ಬಂದಿರುತ್ತಾರೆ ಮತ್ತು ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಆಕಾಶ ಪೂಜಾರಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿ ರವಿ ರೆಬಿನಾಳ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಕ್ರೀಡಾಪಟುಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಅಶೋಕ ಮನಗೂಳಿ ಮತ್ತು ನಿರ್ದೇಶಕ ಮಂಡಳಿ ಸದಸ್ಯರು ಮತ್ತು ಪ್ರಾಚಾರ್ಯ ಎ.ಆರ್.ಹೆಗ್ಗಣದೊಡ್ಡಿ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.