spot_img
spot_img

ಪಿಯು ಪರೀಕ್ಷೆಯಲ್ಲಿ ಸಾಧನೆ

Must Read

ಮೂಡಲಗಿ : ಸಮೀಪದ ಹಳ್ಳೂರ ಗ್ರಾಮದ ಎಸ್.ಆರ್ ಸಂತಿ ಸರಕಾರಿ ಪಿ.ಯು ಕಾಲೇಜಿನ ೨೦೨೧-೨೨ ನೇ ಸಾಲಿನ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ವಿದ್ಯಾರ್ಥಿನಿ ಪೂರ್ಣಿಮಾ ಅಂಗಡಿ ವಾಣಿಜ್ಯ ವಿಭಾಗದಲ್ಲಿ ೫೮೬(೯೭.೬೬%) ಅಂಕಗಳನ್ನು ಪಡೆಯುವ ಮೂಲಕ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ಕಲಾ ವಿಭಾಗದಲ್ಲಿ ಸವಿತಾ ಕೌಜಲಗಿ ೫೭೯ (೯೬.೫೦%) ಅಂಕಗಳೊoದಿಗೆ ಶೈಕ್ಷಣಿಕ ಜಿಲ್ಲೆಗೆ ತೃತೀಯ ಸ್ಥಾನಗಳನ್ನು ಪಡೆಯುವ ಮೂಲಕ ಗ್ರಾಮೀಣ ಪ್ರದೇಶದಲ್ಲಿದ್ದರು ಸಹ ಶೈಕ್ಷಣಿಕವಾಗಿ ಸಾಧನೆ ಗೈದಿದ್ದಾರೆ ಎಂದು ಕಾಲೇಜು ಪ್ರಾಚಾರ್ಯೆ ಸಾವಿತ್ರಿ ಮಹದೇವಪ್ಪ ಕಮಲಾಪೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಉಪಾಧ್ಯಕ್ಷ ಉಮೇಶ ಸಂತಿ, ಚಿಕ್ಕೋಡಿ ಪಿಯು ಉಪನಿರ್ದೇಶಕರಾದ ಭಂಡಾರಿ ಹಾಗೂ ಆಡಳಿತ ಮಂಡಳಿ ಸದಸ್ಯರು, ಕಾಲೇಜು ಸಿಬ್ಬಂದಿ ವರ್ಗ, ಪಾಲಕ-ಪೋಷಕರು, ಶಿಕ್ಷಣ ಪ್ರೇಮಿಗಳು, ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

Latest News

ಈಗಿನಿಂದಲೇ ತಟ್ಟಿದ ಚುನಾವಣೆಯ ಬಿಸಿ

ಬೀದರನ ಭಾಲ್ಕಿಯಲ್ಲಿ ತಂದೆ - ಮಗನ ವಿಭಿನ್ನ ಹೋರಾಟ ಬೀದರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ  ಹತ್ತಿರ ಬರುತ್ತಿದ್ದಂತೆ ಜಿಲ್ಲೆಯ  ಭಾಲ್ಕಿ ಕ್ಷೇತ್ರವು ಎರಡು ರೀತಿಯ ಪ್ರಕರಣಗಳಿಂದ ಸುದ್ದಿಗೆ...
- Advertisement -

More Articles Like This

- Advertisement -
close
error: Content is protected !!