spot_img
spot_img

ಮಾದಿಗ ಸಮಾಜಕ್ಕೆ ಒಳಮೀಸಲಾತಿ ಜಾರಿಗೆ ತರಲು ಆಗ್ರಹಿಸಿ ಮನವಿ

Must Read

ಮೂಡಲಗಿ: ನಿವೃತ್ತ ನ್ಯಾಯಮೂರ್ತಿ ಎ.ಜಿ.ಸದಾಶಿವ ಆಯೋಗದ ವರದಿಯನ್ನು ಸರಕಾರ ಶೀಘ್ರವಾಗಿ ಜಾರಿಗೆ ತರುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸ ಬೇಕೆಂದು ಆಗ್ರಹಿಸಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರಿಗೆ ಪಟ್ಟಣದದಲ್ಲಿ ದಲಿತ ಹಾಗೂ ಬಿಜೆಪಿ ಮುಖಂಡ ಪ್ರಕಾಶ ಮಾದರ ಅವರು ಮನವಿ ಸಲ್ಲಿಸಿದರು.

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ಹೈಕೋರ್ಟ ನಿವೃತ್ತ ನ್ಯಾಯಮೂರ್ತಿ ಎ.ಜಿ.ಸದಾಶಿವ  ಆಯೋಗ ವರದಿಯನ್ನು ನೀಡಿ ಹತ್ತು ವರ್ಷಗಳಾದರು ಸದಾಶಿವ ಆಯೋಗದ ಪ್ರಕಾರ ಪರಿಶಿಷ್ಟ  ಜಾತಿಗಳಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಮಾದಿಗ ಸಮಾಜಕ್ಕೆ ಒಳಮೀಸಲಾತಿ ನೀಡುವ ಸದಾಶಿವ ಆಯೋಗದ ವರದಿಯನ್ನು ಮುಂಬರುವ ಚಳಿಗಾಲದ ಅಧೀವೇಶನದಲ್ಲಿ ವಿಧಾನಸಭೆಯಲ್ಲಿ ಜಾರಿಗೆ ತರಲು ತಾವುಗಳು ಮುಖ್ಯ ಮಂತ್ರಿಗಳ ಮೇಲೆ ಒತ್ತಡ ಹೇರಬೇಕೆಂದು  ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ. 

ಮನವಿ ಸ್ವೀಕರಿಸಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಮಾತನಾಡಿ, ತಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುವದಾಗಿ ಹೇಳಿದರು.

ಈ ಈರಪ್ಪ ಢವಳೇಶ್ವರ, ಕುಮಾರ ಗಿರಡ್ಡಿ, ಡಾ.ಬಿ.ಎಂ.ಪಾಲಭಾವಿ, ಶಿವಬೋಧ ಬೆಳಗಲಿ, ಮಹಾಲಿಂಗ ವಂಟಗೋಡಿ, ಸುಂದರ ಬಾಲಪ್ಪನ್ನವರ ಮತ್ತಿತರರು ಇದ್ದರು.

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!