spot_img
spot_img

ಪಿಎಫ್ ಐ ಮತ್ತು ಎಸ್ ಡಿ ಪಿ ಐ ಕಾಂಗ್ರೆಸ್ ಪಕ್ಷದ ಬಿ ಟೀಮ್ ಗಳು – ತೇಜಸ್ವಿ ಸೂರ್ಯ

Must Read

- Advertisement -

ಬೀದರ: ಕಾಂಗ್ರೆಸ್​ನ ಬಿ ಟೀಂನಂತೆ ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆಗಳು ಕೆಲಸ ಮಾಡುತ್ತಿವೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪ ಮಾಡಿದ್ದಾರೆ.

ಬೀದರ್​ನ ಎಂಎಸ್​ ಪಾಟೀಲ್​ ಕಲ್ಯಾಣ ಮಂಟಪದಲ್ಲಿ ವಿದ್ಯಾರ್ಥಿಗಳ ಜೊತೆ ಸಂವಹನ ನಡೆಸಿದ ಅವರು, ಪಿಎಫ್​ಐ ಹಾಗೂ ಎಸ್​ಡಿಪಿಐ ಸಂಘಟನೆಗಳ ವಿರುದ್ಧ ಹರಿಹಾಯ್ದಿದ್ದಾರೆ.

ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ತೇಜಸ್ವಿ ಸೂರ್ಯ ಬೀದರ ಪ್ರವಾಸ ಕೈಗೊಂಡು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು ಹಾಗು ಯುವ ಮೋರ್ಚಾ ಸಮಾವೇಶದಲ್ಲಿ ಭಾಗಿ ಆಗಿದ್ದು ಈ ಸಂದರ್ಭದಲ್ಲಿ ಮಾತನಾಡಿ,  ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ  ವೋಟ್​ ಬ್ಯಾಂಕ್​ಗಾಗಿ ಕಾಂಗ್ರೆಸ್​ ಕೂಡ ಈ ಸಂಘಟನೆಗಳ ವಿರುದ್ಧ ದನಿ ಎತ್ತುತ್ತಿಲ್ಲ. ಎಸ್​ಡಿಪಿಐ ಜೊತೆ ಕೈ ಜೋಡಿಸಿ ಕಾಂಗ್ರೆಸ್​​ ಕಾರ್ಪೋರೇಷನ್​ ಚುನಾವಣೆ ಎದುರಿಸಿದೆ ಎಂದು ಆರೋಪ ಮಾಡಿದ್ದಾರೆ.

- Advertisement -

ಪ್ರಧಾನಿ ಮೋದಿ ಹೆಸರೇಳಿ ವೋಟ್​ ಕೇಳಿದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂಬ ಪ್ರಮೋದ್​ ಮುತಾಲಿಕ್​ ಹೇಳಿಕೆಗೂ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಮೇ 13ರ ಬಳಿಕ ಜನರ ಉತ್ತರ ಏನು ಅನ್ನೋದು ಎಲ್ಲರಿಗೂ ತಿಳಿಯುತ್ತದೆ. ಈ ರೀತಿ ಮಾತನಾಡುವವರಿಗೆ ರಾಜ್ಯದ ಜನತೆಯೇ ಉತ್ತರ ನೀಡುತ್ತಾರೆ ಎಂದು ಹೇಳಿದರು


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಕವನ : ಗೊಂಬೆಗಳ ಕಣ್ಣೀರು

ಗೊಂಬೆಗಳ ಕಣ್ಣೀರು ಅಂದು ನಾವು ಅಪ್ಪ ಅವ್ವನನ್ನು ಕಾಡಿ ಬೇಡಿ ಗೊಂಬೆಗಳಿಗಾಗಿ ಅಳುತ್ತಿದ್ದೆವು ಜಾತ್ರೆ ಉತ್ಸವದಲ್ಲಿ ಹಿರಿಯರಿಗೆ ದೇವರ ಮೇಲಿನ ಭಕ್ತಿ ನಮಗೋ ಬಣ್ಣ ಬಣ್ಣದ ಗೊಂಬೆಗಳ ಮೇಲೆ ಆಸಕ್ತಿ ಅವ್ವ ಹೇಗೋ ಮಾಡಿ ಅಪ್ಪನ ತುಡುಗಿನಲಿ ತನ್ನಲಿದ್ದ ದುಡ್ಡು ಕೊಟ್ಟು ತಂದಳು ಗೊಂಬೆಗಳ ಮಿತಿ ಇರಲಿಲ್ಲ...
- Advertisement -

More Articles Like This

- Advertisement -
close
error: Content is protected !!
Join WhatsApp Group