ಸಿಂದಗಿ: ತಾಲೂಕಿನ ಖೈನೂರ ಗ್ರಾಮದ ಡಾ.ಪ್ರಶಾಂತ್ ಸಜ್ಜನ ಸರಕಾರಿ ಪ್ರೌಢಶಾಲೆಯ ಸಭಾಭವನದಲ್ಲಿ ಅಕ್ಷರದಮ್ಮ ಸಾವಿತ್ರಿ ಬಾಯಿ ಫುಲೆ ಅವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮವನ್ನುದ್ದೇಶಿಸಿ ಎಸ್ ಆರ್ ಪಾಟೀಲ ಅವರು ಮಾತನಾಡಿ, ನಮ್ಮ ಭಾರತ ದೇಶದ ಮೊದಲ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿರುವ ಫುಲೆಯವರ ಜೀವನ ನಮ್ಮೆಲ್ಲರಿಗೂ ಮಾರ್ಗಸೂಚಿ, ಸಾವಿತ್ರಿಬಾಯಿ ಫುಲೆ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ರಂಗದಲ್ಲಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದಾರೆ ಹಾಗಾಗಿ ಅವರ ಕೊಡುಗೆ ಅಪಾರವಾದದು ಎಂದು ಹೇಳಿದರು.
ಎಂ ಎಸ್ ಪಾಟೀಲ ಶಿಕ್ಷಕರು ಮಾತನಾಡಿ, ಸಾವಿತ್ರಿಬಾಯಿ ಫುಲೆ ಅವರ ಕೊಡುಗೆ ನಮ್ಮ ದೇಶಕ್ಕೆ ಅಪಾರ ಹಾಗಾಗಿ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಎಲ್ಲರೂ ಅನುಸರಿಸಿಕೊಳ್ಳಿ ಎಂದು ಹೇಳಿದರು.
1831 ರಲ್ಲಿ ಮಹಾರಾಷ್ಟ್ರದಲ್ಲಿ ಜನಿಸಿದ ಸಾವಿತ್ರಿ ಬಾಯಿ ಫುಲೆ ಅವರು ಹೆಣ್ಣು ಮಕ್ಕಳಿಗಾಗಿ ಹಲವಾರು ಹೋರಾಟಗಳ ಮೂಲಕ ಸಾಮಾಜಿಕ ಕ್ರಾಂತಿಯನ್ನು ಮಾಡಿದರು ಹಾಗೂ ಸಾಹಿತಿಯಾಗಿ ಹಲವಾರು ಕೃತಿಗಳನ್ನು ಬರೆದಿದ್ದಾರೆ ಹಾಗಾಗಿ ಅವರ ಎಲ್ಲ ವಿಚಾರಧಾರೆಗಳನ್ನು ನಾವೆಲ್ಲರೂ ಅನುಸರಿಸಿಕೊಂಡು ಹೋಗೋಣ ಎಂದು ಶಾಲೆಯ ಮುಖ್ಯೋಪಾಧ್ಯಾಯರಾದ ಕುಮಾರ ಅನಿಲ ಕುಮಾರ ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಗುರು ಮಾತೆಯಾದ ಭುವನೇಶ್ವರಿ ಅವರು ಹೆಣ್ಣುಮಕ್ಕಳಿಗೆ ಯಾವುದೇ ಕ್ಷೇತ್ರದಲ್ಲಿಯೂ ಸ್ಥಾನವನ್ನು ನೀಡದಂತಹ ಪರಿಸ್ಥಿತಿಯಲ್ಲೂ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕಿಯಾಗಿ ಮುಖ್ಯೋಪಾಧ್ಯಾಯಿನಿಯಾಗಿ ಹೆಣ್ಣುಮಕ್ಕಳು ಯಾವುದರಲ್ಲಿಯೂ ಕಡಿಮೆ ಇಲ್ಲ ಎಂಬುದನ್ನು ಇವರು ಸಾಬೀತುಪಡಿಸಿದರು ಹಾಗೂ ಹೆಣ್ಣುಮಕ್ಕಳು ಎಲ್ಲಾ ಕ್ಷೇತ್ರದಲ್ಲಿಯೂ ಸಲ್ಲಿಸುತ್ತಿದ್ದಾರೆ ಹಾಗೆಯೇ ತಾವು ಕೂಡ ಉನ್ನತ ಸ್ಥಾನಗಳನ್ನು ಪಡೆಯಿರಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಎಸ್ ಐ ಹುಡೆದ, ರಾಘವೇಂದ್ರ ಬಸನಾಯಕ, ಅಶೋಕ ಭೋವಿ ಹಾಗೂ ವಿದ್ಯಾರ್ಥಿಗಳು ಮತ್ತು ಪಾಲಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.