ಜೋಡಿ ಕೊಲೆ ಆರೋಪಿಗಳಿಗೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮನವಿ

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಸಿಂದಗಿ: ದೇವರ ಹಿಪ್ಪರಗಿ ತಾಲೂಕಿನ ಸಲಾದಹಳ್ಳಿ ಗ್ರಾಮದಲ್ಲಿ ನಡೆದ ಜೋಡಿ ಕೊಲೆಯಲ್ಲಿ ದಲಿತ ಯುವಕನ್ನು ಹತ್ಯೆಗೈದಿರುವ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ದಲಿತ ಸಾಮಾಜಿಕ ಸಂಘಟನೆಯ ಒಕ್ಕೂಟದ ಪದಾಧಿಕಾರಿಗಳು ಪಟ್ಟಣದ ಮಹಾತ್ಮಾ ಗಾಂಧೀಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಸಂಜೀವಕುಮಾರ ದಾಸರ ಅವರ ಮೂಲಕ ಮುಖ್ಯಮಂತ್ರಿಗಳಿಗೆ, ಗೃಹಸಚಿವರಿಗೆ, ಸಮಾಜ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಿದರು,.

ಈ ಸಂದರ್ಭದಲ್ಲಿ ಮಾದಿಗ ಯುವ ಸೇನೆ ರಾಜ್ಯಾಧ್ಯಕ್ಷ ನಂದಕುಮಾರ ಬಾಂಬೇಕರ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಸಮಾನರು ಇಂತಹ ಸಂದರ್ಭದಲ್ಲಿ ಬೇರೆ ಬೇರೆ ಕೋಮಿನ ನಡುವೆ ಪ್ರೀತಿ ಬಾಂಧವ್ಯಗಳು ಬೆಳೆಯುವುದು ಸಹಜ ಅದನ್ನು ತಿಳಿಗೊಳಿಸಿ ಸಾಮಾಜಿಕವಾಗಿ ನ್ಯಾಯ ಪಂಚಾಯತಿಗಳ ಮೂಲಕ ಬಗೆಹರಿಸಿಕೊಳ್ಳಬೇಕು ಅಥವಾ ದೇಶವೇ ಎಲ್ಲರನ್ನು ಸಮಾನವಾಗಿ ಕಾಣುವ ಸಂದರ್ಭದಲ್ಲಿ ಇಬ್ಬರಲ್ಲಿ ಅನ್ಯೋನ್ಯ ಸಂಬಂದ ಬೆಳೆದಿದ್ದರೆ ಅವರಿಗೆ ಸಾಮೂಹಿಕ ಮದುವೆ ಮಾಡಿಸಬಹುದಿತ್ತು ಅಂತಹ ಯಾವುದನ್ನು ಮಾಡದೇ ಇಬ್ಬರೂ ಪ್ರೇಮಿಗಳನ್ನು ಕೊಲೆ ಮಾಡಿದ್ದು ಮನುಷ್ಯ ಕುಲಕ್ಕೆ ಅವಮಾನ ಮಾಡಿದಂತಾಗಿದೆ ಕಾರಣ ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಉಗ್ರವಾದ ಶಿಕ್ಷೆಗೆ ಗುರಿ ಪಡಿಸಿ ದಲಿತ ಕುಟುಂಬದವರಿಗೆ ಸೂಕ್ತ ರಕ್ಷಣೆ ನೀಡಿ ಸರಕಾರದಿಂದ ಪರಿಹಾರ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.

ಡಿಎಸ್‍ಎಸ್ ಜಿಲ್ಲಾ ಸಂ.ಸಂಚಾಲಕ ವೈ.ಸಿ.ಮಯೂರ ಮಾತನಾಡಿ, ಸ್ವಾತಂತ್ರ್ಯ ದೊರೆತು 7 ದಶಕಗಳು ಗತಿಸಿದರು ಇನ್ನೂವರೆಗೆ ದಲಿತರ ಮೇಲಿನ ದೌರ್ಜನ್ಯ, ಅತ್ಯಾಚಾರ, ಕೊಲೆ ಸುಲಿಗೆ ನಿಲ್ಲುತ್ತಿಲ್ಲ. ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ನಿರ್ಜನ ಪ್ರದೇಶದಲ್ಲಿ ಬಸವರಾಜ್ ಬಡಿಗೇರನ್ನು ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಈ ಕೊಲೆಯಿಂದಾಗಿ ಇಡೀ ಸಮಾಜವೇ ತಲೆ ತಗ್ಗಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

- Advertisement -

ಇಂಡಿ ಡಿವೈಎಸ್ಪಿ ಶ್ರೀಧರ ದೊಡ್ಡಿ ಮಾತನಾಡಿ, ಈ ಪ್ರಕರಣದಲ್ಲಿ ಯಾರೇ ತಪ್ಪಿಸ್ಥರಿರಲಿ ಅವರನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸುವದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಮಾದಿಗ ಸಂಘದ ರಾಜ್ಯಾದ್ಯಕ್ಷ ರಾಜಕುಮಾರ ಬಾಸಗಿ, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು.ಸಿ.ಕೆ, ಡಿಎಸ್‍ಎಸ್ ಸಂಚಾಲಕ ವಿನಾಯಕ ಸಾಗರ, ಸಾಯಬಣ್ಣ ದೇವರಮನಿ, ರಮೇಶ ಐಹೋಳೆ, ಸಿದ್ದು ರಾಯಣ್ಣನವರ, ಚಿದಾನಂದ ಚಂದಾಪುರ, ರಾಜು ಮಾದರ, ಯಲ್ಲು ಇಂಗಳಗಿ, ನಾಗರಾಜ ಚಿಂಚೋಳಿ, ಶರಣು ಶಿಂಧೆ, ಅಶೋಕ ಚಲವಾದಿ, ರಾಜು ಕೂಚಬಾಳ, ರಾಜು ಗುಬ್ಬೇವಾಡ, ಶೇಖರಗೌಡ ಹರನಾಳ, ರವಿ ಬೋರಗಿ, ಸುದೇಷ್ಣ ಜಿಂಗಾಣಿ, ಪರಶುರಾಮ ಸುರಪುರ ಸೇರಿದಂತೆ ಅನೇಕರು ಇದ್ದರು.


 

ಆಗ್ರಹ: ದೇವರ ಹಿಪ್ಪರಗಿ ಮತಕ್ಷೇತ್ರದ ಸಲಾದಹಳ್ಳಿ ಗ್ರಾಮದಲ್ಲಿ ನಡೆದ ಜೋಡಿ ಕೊಲೆಯು ಅತ್ಯಂತ ಭೀಕರವಾಗಿದ್ದು ಇದನ್ನು ಬಹುಜನ ಸಮಾಜ ಪಕ್ಷ ಖಂಡಿಸುತ್ತಿದೆ. ಜಿಲ್ಲೆಯಲ್ಲಿ ಪದೇ ಪದೇ ಇಂತಹ ಘಟನೆಗಳು ಘಟಿಸುತ್ತಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಅಂತ ಗೋಚರಿಸುತ್ತಿದೆ. ಈ ಘಟನೆಯನ್ನು ನಿಷ್ಪಕ್ಷಪಾತವಾಗಿ ಪರಿಶೀಲಿಸಿ ಕೊಲೆಗಡುಕರನ್ನು ಕೂಡಲೇ ಬಂಧಿಸಿ ವಿಚಾರಣೆಗೆ ಒಳಪಡಿಸಿ ಶಿಕ್ಷೆಗೊಳಪಡಿಸಬೇಕು. ಹಾಗೂ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು.

ಡಾ. ದಸ್ತಗೀರ ಮುಲ್ಲಾ
ರಾಜ್ಯ ಪ್ರಧಾನ ಕಾರ್ಯದರ್ಶಿ
ಬಹುಜನ ಸಮಾಜ ಪಕ್ಷ

- Advertisement -
- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!