ಪಿಎಂ ಜನಜಾತೀಯ ಉನ್ನತ ಗ್ರಾಮ ಅಭಿಯಾನಕ್ಕೆ ೫೧ ಜಿಲ್ಲೆಗಳ ಆಯ್ಕೆ – ಈರಣ್ಣ ಕಡಾಡಿ

Must Read

ಬೆಳಗಾವಿ: ಬುಡಕಟ್ಟು ಜನಾಂಗದ ಆದರ್ಶ ಪುರುಷ ಭಗವಾನ ಶ್ರೀ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವದ ನಿಮಿತ್ತ ಅವರ ಸ್ಮರಣೆಗಾಗಿ ಜಿಲ್ಲೆಯ 51 ಗ್ರಾಮಗಳನ್ನು ಪ್ರಧಾನ ಮಂತ್ರಿ ಜನ ಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದರು.

ಪತ್ರಿಕಾ ಹೇಳಿಕೆ ನೀಡಿದ ಅವರು ನವೆಂಬರ 15ರಂದು ಬಿಹಾರ ರಾಜ್ಯದ ಜಾಮೂಯಿಯಲ್ಲಿ ಜನಜಾತಿಯ ಗೌರವ ದಿವಸ ಆಚರಣೆಯ ಪ್ರಯುಕ್ತ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಅದೇ ರೀತಿ ರಾಜ್ಯದ ಮೈಸೂರಿನಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಜನರು ಹೆಚ್ಚು ವಾಸಿಸುವ ಗ್ರಾಮಗಳನ್ನು ಈ ಯೋಜನೆಯಡಿ ಆಯ್ಕೆ ಮಾಡಲಾಗಿದ್ದು ಗೋಕಾಕ ತಾಲ್ಲೂಕಿನಲ್ಲಿ 12, ಬೆಳಗಾವಿ ತಾಲ್ಲೂಕಿನಲ್ಲಿ-10, ಬೈಲಹೊಂಗಲ ತಾಲ್ಲೂಕಿನಲ್ಲಿ-6, ಸವದತ್ತಿ ತಾಲ್ಲೂಕಿನಲ್ಲಿ-4, ಯರಗಟ್ಟಿ ತಾಲ್ಲೂಕಿನಲ್ಲಿ-1, ಹುಕ್ಕೇರಿ ತಾಲ್ಲೂಕಿನಲ್ಲಿ-18, ಖಾನಾಪೂರ-ತಾಲ್ಲೂಕಿನಲ್ಲಿ-1 ಈ ರೀತಿ ಜಿಲ್ಲೆಯಲ್ಲಿ 51 ಗ್ರಾಮಗಳು ಆಯ್ಕೆಯಾಗಿವೆ.

ಆಯ್ಕೆಯಾದ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುದೀಕರಣ, ಮನೆ ನಿರ್ಮಾಣ, ಆರೋಗ್ಯ ಯೋಜನೆಗಳ ಅನುಷ್ಠಾನ, ಪರಿಶಿಷ್ಟ ವರ್ಗದವರಿಗೆ ಶಿಕ್ಷಣ, ಸೋಲಾರ್ ವ್ಯವಸ್ಥೆ, ಕೃಷಿ ಮತ್ತು ತೋಟಗಾರಿಕೆ ಯೋಜನೆಗಳ ಅನುಷ್ಠಾನ ಮತ್ತು ಮೊಬೈಲ್ ಹಾಗೂ ಇಂಟರೆಟ್ ಸಂಪರ್ಕ ಮುಂತಾದ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ ಎಂದಿದ್ದಾರೆ.

ಪರಿಶಿಷ್ಟ ಪಂಗಡದ ಜನರಿಗೆ ಅನುಕೂಲ ಕಲ್ಪಿಸುವ ವಿವಿಧ 17 ಇಲಾಖೆಗಳು ಈ ಎಲ್ಲ ಗ್ರಾಮಗಳಲ್ಲಿ ತಮ್ಮ ತಮ್ಮ ಇಲಾಖೆಗಳಿಂದ ಅನುಷ್ಠಾನಗೊಳ್ಳದೇ ಇರುವ ಕಾಮಗಾರಿಗಳಿಗೆ ಹೊಸ ಕ್ರಿಯಾಯೋಜನೆ ತಯಾರಿಸಿ ಅನುಷ್ಠಾನಗೊಳಿಸಲು ಕ್ರಮ ವಹಿಸಲಿವೆ ಎಂದು ಸಂಸದ ಈರಣ್ಣ ಕಡಾಡಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group