spot_img
spot_img

ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪೋಕ್ಸೋ ಕಾಯ್ದೆ ಜಾರಿಗೆ

Must Read

- Advertisement -

ಸಿಂದಗಿ: ಅಪ್ರಾಪ್ತ ಮಕ್ಕಳ ಮೇಲೆ  ಸಮಾಜದಲ್ಲಿ  ನಡೆಯುವ  ಲೈಂಗಿಕ ದೌರ್ಜನ್ಯ  ತಡೆಗಟ್ಟಲು ಪೋಕ್ಸೋ  ಕಾಯ್ದೆ ಜಾರಿಗೆ ಬಂದಿರುವ  ಕುರಿತು ಜನರಲ್ಲಿ ಅರಿವು ಮೂಡಿಸುವುದು ಅತ್ಯವಶ್ಯವಾಗಿದೆ ಎಂದು ಹಿರಿಯ ಉಪನ್ಯಾಸಕ ಶಿವಾನಂದ ಮಡಿವಾಳರ ಹೇಳಿದರು.

ತಾಲೂಕಿನ ಮೋರಟಗಿ ಗ್ರಾಮದ ಎಸ್.ಎಸ್.ಎಸ್.ಪದವಿ ಪೂರ್ವ ಮಹಾ ವಿದ್ಯಾಲಯದ ಸಭಾ ಭವನದಲ್ಲಿ  ಹಮ್ಮಿಕೊಂಡಿದ್ದ ಪೋಕ್ಸೋ ಮಾಹಿತಿ ಕಾನೂನು ಅರಿವು   ಕಾರ್ಯ ಕ್ರಮದಲ್ಲಿ  ಅವರು ಭಾಗವಹಿಸಿ ಮಾತನಾಡಿದರು.

ದೇಶದ ಪ್ರತಿಯೊಬ್ಬರೂ ಈ ನೆಲದ ಕಾನೂನನ್ನು ಗೌರವಿಸಬೇಕು. ನಾವು ಕಾನೂನು ರಕ್ಷಣೆ ಮಾಡಿದರೆ ಕಾನೂನು ನಮ್ಮನ್ನು ರಕ್ಷಣೆ ಮಾಡುತ್ತದೆ. ಕಾನೂನು ಅರಿವು ಇಲ್ಲದಿದ್ದರೆ ಅಪರಾಧ ಪ್ರಕರಣಗಳು ಹೆಚ್ಚುತ್ತವೆ ಎಂದರು.ಹದಿನೆಂಟು ವರ್ಷ ವಯೋಮಿತಿಯೊಳಗಿನ ಯಾವುದೇ ಮಕ್ಕಳನ್ನು ಅಪ್ರಾಪ್ತ ವಯಸ್ಸಿನವರೆಂದು ಪರಿಗಣಿಸಲಾಗುತ್ತಿದೆ. ಪೋಕ್ಸೋ ಕಾಯ್ದೆ ವ್ಯಾಪ್ತಿಗೆ ಒಳಪಡುತ್ತಾರೆ. ಇಂಥ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವುದು ಅಕ್ಷಮ್ಯ ಅಪರಾಧ. ಪೋಕ್ಸೋ ಕಾಯ್ದೆಯಡಿ ಯಾವುದೇ ವ್ಯಕ್ತಿ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ಸಾಬೀತಾದರೆ ಅಂಥ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ ಎಂದರು.

- Advertisement -
- Advertisement -

Latest News

ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಸಮಾನತೆ ದೊರಕಬೇಕು- ಸಿಡಿಪಿಓ ಶ್ವೇತಾ

ಮೈಸೂರು ನಗರ ವರ್ತಲ ರಸ್ತೆಯಲ್ಲಿರುವ ಮಾರ್ವೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
- Advertisement -

More Articles Like This

- Advertisement -
close
error: Content is protected !!
Join WhatsApp Group