spot_img
spot_img

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಪೋಕ್ಸೋ ಜಾಗೃತಿ ಕಾರ್ಯಕ್ರಮ

Must Read

spot_img
- Advertisement -

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಬೈಲಹೊಂಗಲ, ನ್ಯಾಯವಾದಿಗಳ ಸಂಘ ಬೈಲಹೊಂಗಲ, ಪ್ಯಾನಲ್ ವಕೀಲರು ಬೈಲಹೊಂಗಲ ಹಾಗೂ ಶಾಲೆಯ ವೃತ್ತಿ ಮಾರ್ಗದರ್ಶನ ಮತ್ತು ಆಪ್ತಸಲಹಾ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಪೋಕ್ಸೋ ಕಾಯ್ದೆಯ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪೆನಲ್ ವಕೀಲರಾದ ದುಂಡಪ್ಪ ಗರಗದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಕಾನೂನುಗಳ ಬಗ್ಗೆ ತಿಳಿವಳಿಕೆ ಇರಬೇಕು ಹಾಗೂ ಪಾಲಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಉಪನ್ಯಾಸಕರಾಗಿ ಆಗಮಿಸಿದ ಪೆನಲ್ ವಕೀಲರಾದ ಬಸವರಾಜ ದೊತರದ ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಮಕ್ಕಳನ್ನು ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳಗಳಿಂದ ರಕ್ಷಣೆ ಮಾಡುವುದರ ಮೂಲಕ ಕಾಯಿದೆಯ ಅನುಷ್ಠಾನ ತರುವಲ್ಲಿ ಎಲ್ಲರ ಜವಾಬ್ದಾರಿ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾಡಿದ ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ, ಕಾನೂನುಗಳ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿ ಪಡೆದುಕೊಂಡು ಪಾಲಕರಲ್ಲಿ ಜಾಗೃತಿ ಮೂಡಿಸುವಲ್ಲಿ ಕಾಳಜಿ ವಹಿಸಬೇಕು ಎಂದರು. ಕಾನೂನು ಸೇವಾ ಸಮಿತಿ ಸಂಚಾಲಕರಾದ ಕುಮಾರ ಬಾರಿಮರದ, ಶಿಕ್ಷಕರಾದ ಸುನಿಲ ಭಜಂತ್ರಿ, ವಿರೇಂದ್ರ ಪಾಟೀಲ, ರೇಖಾ ಸೊರಟೂರ, ಹೇಮಲತಾ ಪುರಾಣಿಕ, ಪ್ರಶಿಕ್ಷಣಾರ್ಥಿಗಳಾದ ಜ್ಯೋತಿ ಹಿರೇಮಠ, ಚೈತ್ರಾ ಹೂಲಿಮಠ, ದೇಮಪ್ಪ ಜೋಗಿಗುಡ್ಡ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕರಾದ ಜಗದೀಶ ನರಿ ಸ್ವಾಗತಿಸಿದರು. ಪೃಥ್ವಿ ಗರಗದ ನಿರೂಪಿಸಿದರು. ಕಾವೇರಿ ಸೊಗಲದ ವಂದಿಸಿದರು.

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group