ರಾಜ್ಯಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Must Read

ಬೈಲಹೊಂಗಲ: ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ‘ಕರ್ನಾಟಕ ಸಂಭ್ರಮ 50’ ಹಾಗೂ ‘ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ’ ಘೋಷಣೆ ನಿಮಿತ್ತವಾಗಿ ಜುಲೈ ತಿಂಗಳಿನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ಏರ್ಪಡಿಸಲು ನಿರ್ಧರಿಸಲಾಗಿದೆ.

ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆ, ಬಸವಣ್ಣನವರು, ಶರಣ ಸಂಸ್ಕೃತಿ, ವಚನ ಸಾಹಿತ್ಯ, ಶರಣರ ಬದುಕು- ಬರಹ ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಕವನಗಳನ್ನು ಆಹ್ವಾನಿಸಲಾಗಿದೆ.

ಕವನ 30 ಸಾಲುಗಳಿಗೆ ಮಿಕ್ಕದಂತೆ ಡಿಟಿಪಿ ಮಾಡಿಸಿ ಸ್ವವಿಳಾಸ, ಕಿರುಪರಿಚಯ, ಭಾವಚಿತ್ರ, ವಾಟ್ಸಪ್ ಮೊಬೈಲ್ ಸಂಖ್ಯೆಯೊಂದಿಗೆ ಜೂನ 30 ರ ಒಳಗಾಗಿ ಬೈಲಹೊಂಗಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಇವರ ಇಮೇಲ್ nrthakkai@gmail.com ವಿಳಾಸಕ್ಕೆ ಕಳಿಸುವುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9945326808/8861325272/9535653166 ಸಂಪರ್ಕಿಸಬೇಕೆಂದು ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ.ಪ್ರಕಾಶ ಮೆಳವಂಕಿ, ಶ್ರೀಮತಿ ಮಂಜುಳಾ ಶೆಟ್ಟರ, ಗೌರವ ಕೋಶಾಧ್ಯಕ್ಷರಾದ ಮಹೇಶ ಕೋಟಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಗಾರ್ಡನ್ ಅಭಿವೃದ್ದಿಗೆ  ರೂ.೨೩.೩೯ ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಚಾಲನೆ

ಸಿಂದಗಿ; ಆಯಾ ವಾರ್ಡುಗಳು ಸಾರ್ವಜನಿಕರು, ವಯೋ ವೃದ್ಧರು ವಾಯು ವಿಹಾರಕ್ಕೆ ಅನುಕೂಲವಾಗಲೆಂದು ಪಟ್ಟಣದ ಎಲ್ಲ ಉದ್ಯಾನವನಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ. ಪಟ್ಟಣದಲ್ಲಿ ಒಟ್ಟು ೭೨...

More Articles Like This

error: Content is protected !!
Join WhatsApp Group