spot_img
spot_img

ಮಕರ ಸಂಕ್ರಾತಿಯ ನಿಮಿತ್ತ ರಾಜ್ಯಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Must Read

spot_img
- Advertisement -

ಬೈಲಹೊಂಗಲ: ಮಣೂರ ಪ್ರಕಾಶನ ಕಲಬುರಗಿ ಇವರ ವತಿಯಿಂದ ಮಕರ ಸಂಕ್ರಾಂತಿ ನಿಮಿತ್ತ ಚೆನ್ನಮ್ಮಾಜಿಯವರ ಐಕ್ಯ ಸ್ಥಳವಾದ ಬೈಲಹೊಂಗಲದಲ್ಲಿ ಜನವರಿ ತಿಂಗಳಿನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ಆಯೋಜಿಸಲಾಗಿದೆ.

ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ, ವೀರರಾಣಿ ಕಿತ್ತೂರು‌ ಚನ್ನಮ್ಮ, ಸ್ವಾತಂತ್ರ್ಯ ಹೋರಾಟಗಾರರು, ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆ, ಪರಿಸರ ಪ್ರೇಮ, ರಾಷ್ಟ್ರಪ್ರೇಮ, ಮಾನವೀಯ ಮೌಲ್ಯಗಳು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಕವನಗಳನ್ನು ಆಹ್ವಾನಿಸಲಾಗಿದೆ.

ಕವನವು 30 ಸಾಲುಗಳಿಗೆ ಮಿಕ್ಕದಂತೆ ಕಾಗದದ ಒಂದೇ ಮಗ್ಗುಲಲ್ಲಿ ಬರೆದು ಅಥವಾ ಡಿಟಿಪಿ ಮಾಡಿಸಿರಬೇಕು. ಸ್ವವಿಳಾಸ, ಕಿರುಪರಿಚಯ, ಭಾವಚಿತ್ರ, ವಾಟ್ಸಪ್ ಮೊಬೈಲ್ ಸಂಖ್ಯೆಯೊಂದಿಗೆ ಜನವರಿ 5ರ ಒಳಗಾಗಿ  ಮೋಹನ ಬಸನಗೌಡ ಪಾಟೀಲ, ಮಾಜಿ ಜಿಲ್ಲಾಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, “ಬಸವ ನಿವಾಸ”, ಚನ್ನಮ್ಮನಗರ ಮೊದಲನೆಯ ಅಡ್ಡರಸ್ತೆ, ಬೈಲಹೊಂಗಲ- 591102, ಬೆಳಗಾವಿ ಜಿಲ್ಲೆ. ಈ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಕಳಿಸಬೇಕು.

- Advertisement -

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9448920888 ಸಂಪರ್ಕಿಸಬೇಕೆಂದು ಮಣೂರ ಪ್ರಕಾಶನದ ಮುಖ್ಯಸ್ಥರಾದ ಡಾ. ಫಾರೂಕ್ ಅಹಮ್ಮದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಅವ ಹಿಂದು ಅವ ಜೈನ ಅವ ಬೌದ್ಧ ಅವ ಸಿಖ್ಖ ಅವ ಕ್ರೈಸ್ತ ಅವ ಮಹಮದೀಯನೆಂದು ದಯಮಾಡಿ ಕರೆಯದಿರು ಬೇರೆಯವರೆನ್ನದಿರು ಅವರು ನಮ್ಮವರೆನ್ನು - ಎಮ್ಮೆತಮ್ಮ ಶಬ್ಧಾರ್ಥ ಮಹಮದೀಯ‌ = ಮುಸಲ್ಮಾನ ತಾತ್ಪರ್ಯ ಜಗತ್ತಿನಲ್ಲಿ‌ ಹಿಂದು‌,...
- Advertisement -

More Articles Like This

- Advertisement -
close
error: Content is protected !!
Join WhatsApp Group