- Advertisement -
ಬೀದರ – ಕೆನಡಾ ದೇಶದ ಪೌರತ್ವ ಹೊಂದಿರುವ ಉತ್ತರ ಪ್ರದೇಶದ ಅಲಿಗಢ ಮೂಲದ ಉರ್ದು ಕವಿ ತಾರೀಕ್ ಫಾರೂಕ್ (78) ಭಾನುವಾರ ಇಲ್ಲಿ ಹೃದಯಾಘಾತದಿಂದ ನಿಧನರಾದರು.
ನಗರದ ತೇರು ಮೈದಾನದಲ್ಲಿನ ಸಭಾ ಭವನದಲ್ಲಿ ಟೆಕ್ನೋಕ್ರೇಟ್ ಹಾಗೂ ಸಾಹಿತ್ಯಾಭಿಮಾನಿಗಳ ಸಂಘದಿಂದ ಹಮ್ಮಿಕೊಂಡಿದ್ದ ಮುಷಾಯಿರಾ ಹಾಗೂ ಕವಿ ಸಮ್ಮೇಳನದಲ್ಲಿ ಭಾಗವಹಿಸುವುದಕ್ಕಾಗಿ ಅವರು ಇಲ್ಲಿಗೆ ಬಂದಿದ್ದರು.ಆದರೆ, ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೂ ಮೊದಲೇ ಎದೆನೋವು ಕಾಣಿಸಿಕೊಂಡಿದ್ದರಿಂದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು.
ಚಿಕಿತ್ಸೆ ಸ್ಪಂದಿಸದೆ ಕೊನೆಯುಸಿರೆಳೆದರು.
- Advertisement -
ಅವರ ಇಬ್ಬರು ಪುತ್ರರು ಅಲಿಗಢದಲ್ಲಿ ಇರುವುದರಿಂದ ಮೃತದೇಹವನ್ನು ಅಲ್ಲಿಗೆ ಕಳುಹಿಸಿಕೊಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.