spot_img
spot_img

ಬಡ-ಮಧ್ಯಮ ವರ್ಗ ಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ

Must Read

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಮಧ್ಯಮ, ಬಡವರ ಕುಟುಂಬ ಸ್ನೇಹಿ ಬಜೆಟ್ ಆಗಿದೆ. ದೇಶದ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಪ್ರಗತಿಗೆ ಹಾಗೂ ಉದ್ಯಮಗಳ ಬೆಳವಣಿಗೆಗೆ ಹತ್ತು ಹಲವಾರು ಅಂಶಗಳನ್ನು ಅವರು ಕೊಡುಗೆಯಾಗಿ ನೀಡಿದ್ದಾರೆ. ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ ₹೫೩೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ.

ಅದರಂತೆ ಆದಾಯ ಮಿತಿ ಹೆಚ್ಚಳ, ಕೃಷಿ ಉದ್ಯಮಿಗಳ ಸ್ಟಾರ್ಟಪ್ ಅಪ್‌ಗೆ ಉತ್ತೇಜನ, ೧೫೭ ಹೊಸ ನರ್ಸಿಂಗ್ ಕಾಲೇಜು ಸ್ಥಾಪನೆ, ೫೦ ಹೊಸ ವಿಮಾನ ನಿಲ್ದಾಣ, ಏಕಲವ್ಯ ಶಾಲಾ ವಸತಿ ಶಾಲೆಗಳಿಗೆ ಶಿಕ್ಷಕರ ನೇಮಕ, ಮಹಿಳಾ ಸಮ್ಮಾನ್ ಯೋಜನೆ, ಯುವಕರ ಕೌಶಲ್ಯಕ್ಕೆ ಯೋಜನೆ, ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಅಂಶಗಳು, ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯ ಸ್ಥಾಪನೆ, ಆವಾಸ್ ಯೋಜನೆಗೆ ಉತ್ತೇಜನದಂತಹ ಹತ್ತು ಹಲವಾರು ಯೋಜನೆಗಳು ದೇಶವನ್ನು ವಿಶ್ವದಲ್ಲಿ ಮತ್ತಷ್ಟು ಉನ್ನತ್ತಕ್ಕೆ ಏರಿಸಲು ಅನುಕೂಲವಾಗಿದೆ. ಸಮೃದ್ಧ ಭಾರತ ನಿರ್ಮಾಣ ಮಾಡಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿಗೆ ಬಜೆಟ್ ಮತ್ತಷ್ಟು ಶಕ್ತಿ ತುಂಬಿದೆ.

- Advertisement -
- Advertisement -

Latest News

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ...
- Advertisement -

More Articles Like This

- Advertisement -
close
error: Content is protected !!